ETV Bharat / bharat

ಸರ್ಕಾರದ ಅಭಿಪ್ರಾಯಕ್ಕಿಂತ ಭಿನ್ನವಾದ ಅಭಿಪ್ರಾಯವನ್ನು "ದೇಶದ್ರೋಹ" ಎಂದು ಕರೆಯಲಾಗುವುದಿಲ್ಲ - ಸುಪ್ರೀಂ - ಫಾರೂಕ್ ಅಬ್ದುಲ್ಲಾ ವಿರುದ್ಧ ದೇಶದ್ರೋಹ ಆರೋಪ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಸರ್ಕಾರದ ಅಭಿಪ್ರಾಯಕ್ಕಿಂತ ಭಿನ್ನವಾದ ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ದೇಶದ್ರೋಹ ಎಂದು ಕರೆಯಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್​ ಪೀಠವು ಅಭಿಪ್ರಾಯಪಟ್ಟಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ವಿರುದ್ಧದ ದೇಶದ್ರೋಹದ ಆರೋಪ ಪ್ರಕರಣ ವಿಚಾರಣೆ ವೇಳೆ ಕೋರ್ಟ್​ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
author img

By

Published : Mar 3, 2021, 12:28 PM IST

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿರುದ್ಧದ ದೇಶದ್ರೋಹ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಫಾರೂಕ್ ಅಬ್ದುಲ್ಲಾ ವಿರುದ್ಧ ಪಿಐಎಲ್​ ವಿಚಾರಣೆಗೆ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ನ್ಯಾಯಪೀಠ ವಿಚಾರಣೆ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ಸರ್ಕಾರದ ಅಭಿಪ್ರಾಯಕ್ಕಿಂತ ಭಿನ್ನವಾದ ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ದೇಶದ್ರೋಹ ಎಂದು ಕರೆಯಲಾಗುವುದಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: 12 ಮಣಿಪುರ ಬಿಜೆಪಿ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು 'ವಿಳಂಬ' ಪ್ರಶ್ನಿಸಿದ ಕಾಂಗ್ರೆಸ್​

ಆರ್ಟಿಕಲ್ 370 ರನ್ನು ರದ್ದುಗೊಳಿಸುವ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ವಿರುದ್ಧದ ಪಿಐಎಲ್ ವಿಚಾರಣೆ ನಡೆಸುತ್ತಿರುವಾಗ, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ನ್ಯಾಯಪೀಠವು "ಭಿನ್ನಾಭಿಪ್ರಾಯ ಮತ್ತು ಸರ್ಕಾರದ ಅಭಿಪ್ರಾಯಕ್ಕಿಂತ ಭಿನ್ನವಾದ ಅಭಿಪ್ರಾಯಗಳ ಅಭಿವ್ಯಕ್ತಿಯನ್ನು ದೇಶದ್ರೋಹ ಎಂದು ಹೇಳಲಾಗುವುದಿಲ್ಲ" ಎಂದು ಹೇಳಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.