ETV Bharat / bharat

'ಮಹಾ' ಗೃಹ ಸಚಿವರ ವಿರುದ್ಧ ಸಿಬಿಐ ತನಿಖೆ ಕೋರಿ​ ಅರ್ಜಿ: ಹೈಕೋರ್ಟ್​ ಸಂಪರ್ಕಿಸಿ ಎಂದ ಸುಪ್ರೀಂ - ಸಿಬಿಐ ತನಿಖೆ

ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್​ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ವಸೂಲಿ ಮಾಡಿಕೊಡುವಂತೆ ಪೊಲೀಸ್ ಅಧಿಕಾರಿಗಳ ಮೇಲೆ ಮಹಾರಾಷ್ಟ್ರದ ಗೃಹ ಸಚಿವ‌ ಅನಿಲ್ ದೇಶಮುಖ್ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ತನಿಖೆ ನಡೆಸುವಂತೆ ಸುಪ್ರೀಂ ಮೆಟ್ಟಿಲೇರಿದ್ದ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ಅರ್ಜಿಯನ್ನು ಸುಪ್ರೀಂ ನಿರಾಕರಿಸಿದ್ದು, ಈ ಸಂಬಂಧ ಹೈಕೋರ್ಟ್‌ನ್ನು ಸಂಪರ್ಕಿಸುವಂತೆ ಸಿಂಗ್‌ಗೆ ಕೋರ್ಟ್​ ಸೂಚಿಸಿದೆ.

Param Bir Singh underway
ಹೈಕೋರ್ಟ್​ ಅನ್ನು ಸಂಪರ್ಕಿಸಲಿ ಎಂದ ಸುಪ್ರೀಂ
author img

By

Published : Mar 24, 2021, 12:56 PM IST

ನವದೆಹಲಿ: ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶ್​ಮುಖ್​ ಅವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್​ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ಈ ವಿಷಯದಲ್ಲಿ ಹೈಕೋರ್ಟ್‌ನ್ನು ಸಂಪರ್ಕಿಸುವಂತೆ ನ್ಯಾಯಾಲಯ ಸಿಂಗ್‌ಗೆ ಸೂಚಿಸಿತು. ಹೈಕೋರ್ಟ್​ಗೆ ಹೋಗಲು ನಿಮಗೆ ಸ್ವಾತಂತ್ರ್ಯವಿದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಹೀಗಾಗಿ ಪರಮ್ ಬೀರ್​ಸಿಂಗ್ ತಾವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಮನವಿಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಬಾಂಬೆ ಹೈಕೋರ್ಟ್‌ನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಆಯುಕ್ತರು ಮಾಡಿರುವ ಆರೋಪಗಳು ತುಂಬಾ ಗಂಭೀರವಾಗಿವೆ. ಸಿಬಿಐ ತನಿಖೆಗಾಗಿ ಬಾಂಬೆ ಹೈಕೋರ್ಟ್ ಅನ್ನು ಏಕೆ ಸಂಪರ್ಕಿಸುತ್ತಿಲ್ಲ ಎಂದು ಪರಮ್ ಬೀರ್​ಸಿಂಗ್ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಸುಪ್ರೀಂ ಕೋರ್ಟ್ ಕೇಳಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.