ETV Bharat / bharat

ಹಿಜಾಬ್​ ಪ್ರಕರಣ: ಜಡ್ಜ್​ಗಳಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ಸುಪ್ರೀಂಕೋರ್ಟ್ ನೋಟಿಸ್​ - ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ಸುಪ್ರೀಂಕೋರ್ಟ್ ನೋಟಿಸ್

ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದ ಆರೋಪಿ ಪ್ರಕರಣ ವಜಾಗೊಳಿಸಲು ಅಥವಾ ಮಧುರೈ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಆ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆರೋಪಿಗೆ ನೋಟಿಸ್ ನೀಡಿದೆ.

sc-issues-notice-in-plea-by-a-person-who-allegedly-threatened-the-judges-of-karnataka-high-court-on-hijab
ಜಡ್ಜ್​ಗಳಿಗೆ ಬೆದರಿಕೆ ಹಾಕಿದ ಆರೋಪ: ಆರೋಪಿಗೆ ಸುಪ್ರೀಂಕೋರ್ಟ್ ನೋಟಿಸ್​
author img

By

Published : Apr 13, 2022, 1:20 PM IST

ನವದೆಹಲಿ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದ ಆರೋಪಿ ಸಲ್ಲಿಸಿದ್ದ ಮನವಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ವ್ಯಕ್ತಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿತ್ತು. ಆದರೆ, ಆ ಪ್ರಕರಣವನ್ನು ಮಧುರೈಗೆ ವರ್ಗಾಯಿಸುವಂತೆ ಅಥವಾ ವಜಾಗೊಳಿಸುವಂತೆ ಆರೋಪಿ ಅರ್ಜಿ ಸಲ್ಲಿಸಿದ್ದನು.

ತಮಿಳುನಾಡು ಮೂಲದ ಇಸ್ಲಾಮಿಕ್ ಸಂಘಟನೆಗಳಿಂದ ಕರ್ನಾಟಕ ಹೈಕೋರ್ಟ್ ಜಡ್ಜ್​ಗಳಿಗೆ ಜೀವ ಬೆದರಿಕೆ ಹಾಕಿರುವ ಆರೋಪವಿದ್ದು, ಈ ಬೆದರಿಕೆಯ ನಂತರ ಮುಖ್ಯ ನ್ಯಾಯಮೂರ್ತಿ ಸೇರಿ ಮೂವರು ನ್ಯಾಯಮೂರ್ತಿಗಳಿಗೆ ವೈ ಶ್ರೇಣಿಯ ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ನಂತರ ತನಿಖೆ ನಡೆಸಿದ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಇದರಲ್ಲಿ ಓರ್ವ ವ್ಯಕ್ತಿ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​​ನಿಂದ ಮಧುರೈಗೆ ಪ್ರಕರಣವನ್ನು ವರ್ಗಾಯಿಸಲು ಅಥವಾ ವಜಾಗೊಳಿಸಲು ಮನವಿ ಸಲ್ಲಿಸಿದ್ದನು.

ಇದನ್ನೂ ಓದಿ: ಮಂಗಳೂರು: ಕಪ್ಪು ಬಾವುಟ ಪ್ರದರ್ಶಿಸಿ ಸಿಎಂ ಕಾರು ತಡೆಗೆ ಯತ್ನಿಸಿದ SDPI ಕಾರ್ಯಕರ್ತರು

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.