ನವದೆಹಲಿ: ಗುಜರಾತ್‌ನಿಂದ ರಾಜ್ಯಸಭೆಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಆಯ್ಕೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.
ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಎಸ್ ಬೊ ಪನ್ನಾ ಮತ್ತು ವಿ ರಾಮಸುಬ್ರಮಣಿಯನ್ ಅವರು ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಮನವಿಯನ್ನು ಆಲಿಸಿ, ಕಾಲಮಿತಿಯೊಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್ನಲ್ಲಿ ಸೂಚಿಸಿದೆ. ಜೈಶಂಕರ್ ಪರ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ ನೋಟಿಸ್ ಸ್ವೀಕರಿಸಿದರು.
ನಾವು ನಿಮಗೆ ಕಡಿಮೆ ಅಲ್ಪ ಗಡುವು ನೀಡುತ್ತೇವೆ. ಅದನ್ನು ನಾನಾ ದಿನಗಳಲ್ಲಿ ಪಟ್ಟಿ ಮಾಡಲಾಗುವುದು ಎಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ವಿಚಾರಣೆಯಲ್ಲಿ ನ್ಯಾಯಪೀಠ ಹೇಳಿದೆ.
ರಾಜ್ಯಸಭೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತ ಮತ್ತು ಪ್ರಾಸಂಗಿಕ ಚುನಾವಣೆಗಳಿಗೆ ಉಪಚುನಾವಣೆ ನಡೆಸಲು ಪ್ರತ್ಯೇಕ ಅಧಿಸೂಚನೆ ಹೊರಡಿಸುವ ಬಗ್ಗೆ ಚುನಾವಣೆ ಆಯೋಗ ಅಧಿಕಾರ ಹೊಂದಿದೆ ಎಂದು ಈ ಹಿಂದೆ ಉನ್ನತ ನ್ಯಾಯಾಲಯ ಹೇಳಿತ್ತು.
2019ರಲ್ಲಿ ಗುಜರಾತ್‌ನಿಂದ ಎರಡು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಎರಡೂ ಸ್ಥಾನಗಳನ್ನು ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದರು.
ಒಂದಕ್ಕಿಂತ ಹೆಚ್ಚು ಖಾಲಿ ಹುದ್ದೆಗಳಿಗೆ ಚುನಾವಣೆ ಪ್ರತ್ಯೇಕವಾಗಿ ಅಥವಾ ಜಂಟಿಯಾಗಿ ನಡೆಯಬೇಕೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ನ ಅಧಿಕೃತ ತೀರ್ಪು ಇಲ್ಲ ಎಂದು ಈ ಹಿಂದೆ ನ್ಯಾಯಾಲಯ ಹೇಳಿತ್ತು. ಗುಜರಾತ್ ಹೈಕೋರ್ಟ್ ಫೆಬ್ರವರಿ 4ರಂದು ಕಾಂಗ್ರೆಸ್ ಮುಖಂಡರ ಮನವಿಯನ್ನು ವಜಾಗೊಳಿಸಿತ್ತು.