ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳು ಅವಧಿಪೂರ್ವ ಬಿಡುಗಡೆ ಕೋರಿ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.
ಎಸ್ ನಳಿನಿ ಮತ್ತು ಪಿ ರವಿಚಂದ್ರನ್ ತಮ್ಮ ಬಿಡುಗಡೆ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ತಮಿಳುನಾಡು ಮತ್ತು ಕೇಂದ್ರ ಸರ್ಕಾರಗಳಿಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿ ಮಾಡಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ಪ್ರಚಾರ ವೇಳೆ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾಗಿದ್ದರು. ಈ ಹತ್ಯೆ ಏಳು ಜನರು ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಹತ್ಯೆಯ ಸಮಯದಲ್ಲಿ 19 ವರ್ಷ ವಯಸ್ಸಿನವನಾಗಿದ್ದ ಪೇರಾರಿವಾಲನ್ ರಾಜೀವ್ ಮೇನಲ್ಲಿ ಬಿಡುಗಡೆಯಾಗಿದ್ದರು.
ಓದಿ: ರಾಜೀವ್ ಗಾಂಧಿ: ದೇಶ ಕಂಡ ವರ್ಚಸ್ವಿ ನಾಯಕನ ಬಗ್ಗೆ ಕುತೂಹಲಕಾರಿ ಸಂಗತಿಗಳು..