ನವದೆಹಲಿ: ದಾಳಿ ನಡೆಸಿದ ಬಳಿಕ ಬಂಧಿಸುವ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಎತ್ತಿ ಹಿಡಿದಿರುವ ಪಿಎಂಎಲ್‌ಎ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಈ ಕುರಿತು ಕೇಂದ್ರದ ಪ್ರತಿಕ್ರಿಯೆಯನ್ನೂ ಕೇಳಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಪೀಠ, ಎನ್‌ಫೋರ್ಸ್‌ಮೆಂಟ್ ಕೇಸ್ ಇನ್ಫರ್ಮೇಷನ್ ರಿಪೋರ್ಟ್ (ಇಸಿಐಆರ್) ಒದಗಿಸದಿರುವುದು ಸೇರಿದಂತೆ ಎರಡು ವಿಷಯಗಳ ಮರುಪರಿಶೀಲನೆಯ ಅಗತ್ಯವಿದೆ ಎಂದು ಹೇಳಿದೆ.
ಪಿಎಂಎಲ್‌ಎ ಅಡಿ ಬಂಧನ, ತನಿಖೆ ಮತ್ತು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಇಡಿಯ ವ್ಯಾಪಕ ಅಧಿಕಾರವನ್ನು ಎತ್ತಿಹಿಡಿಯುವ ಸುಪ್ರೀಂಕೋರ್ಟ್‌ನ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅರ್ಜಿ ಸಲ್ಲಿಸಿದ್ದರು. ಇದನ್ನು ಕೋರ್ಟ್ ಬುಧವಾರ ಪುರಸ್ಕರಿಸಿದೆ.
ಜುಲೈ 27 ರ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ವ್ಯಕ್ತಿ, ಸಂಸ್ಥೆಯ ವಿರುದ್ಧ ಆರೋಪ ಕೇಳಿ ಬಂದಾಗ ಅದರ ಆಸ್ತಿಯನ್ನು ಜಪ್ತಿ ಮಾಡುವ ಆದೇಶವನ್ನು ಹೊರಡಿಸಬಹುದು. ಇದು ನಿಯಮವಲ್ಲದಿದ್ದರೂ ಅವಕಾಶವಿದೆ. ಜೊತೆಗೆ ಸೆಕ್ಷನ್ 8(4) ಅಡಿಯಲ್ಲಿ ಪ್ರಾಧಿಕಾರದಿಂದ ವಿಚಾರಣೆಯ ವೇಳೆ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಧಿಕಾರವನ್ನು ಅನುಮತಿಸಲಾಗಿದೆ.
ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ.. ಕೇಂದ್ರ, ಗುಜರಾತ್ ಸರ್ಕಾರಗಳಿಗೆ ಸುಪ್ರೀಂ ನೋಟಿಸ್