ನವದೆಹಲಿ: ಹೈಕೋರ್ಟ್‌ಗಳ ಕಾರ್ಯವೈಖರಿಯ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್‌ಗಳು ಕೇವಲ 'ಕಟ್-ಪೇಸ್ಟ್' ಆದೇಶಗಳನ್ನು ನೀಡುತ್ತಿವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹೇಳಿದ್ದಾರೆ.
ಇದು ಆಧುನಿಕ ಯುಗಕ್ಕೆ ಸಂಬಂಧಿಸಿದ ಸಮಸ್ಯೆಗಳಲ್ಲಿ ಒಂದಾಗಿದೆ. ಇಂತಹ ಆದೇಶಗಳನ್ನು ನೋಡಿ ನನಗೆ ಬೇಸರವಾಗಿದೆ ಎಂದು ಅವರು ಹೇಳಿದರು.
ಆದೇಶ ನೀಡುವಾಗ ಸ್ವತಂತ್ರ ವಿವೇಚನೆ ಇರಬೇಕು. 'ಕಟ್-ಪೇಸ್ಟ್' ಪುಟಗಳ ಸಂಖ್ಯೆಯನ್ನು ಮಾತ್ರ ಹೆಚ್ಚಿಸುತ್ತಿದೆ ಎಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ತಿಳಿಸಿದರು.