ETV Bharat / bharat

ಬಿಲ್ಕಿಸ್ ಬಾನು ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ 'ಸುಪ್ರೀಂ' ನ್ಯಾಯಮೂರ್ತಿ

11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ ಬಿಲ್ಕಿಸ್ ಬಾನು ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಹಿಂದೆ ಸರಿದಿದ್ದಾರೆ.

sc-judge-justice-bela-m-trivedi-recuses-from-hearing-bilkis-banos-plea-against-early-release-of-convicts
ಬಿಲ್ಕಿಸ್ ಬಾನು ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ 'ಸುಪ್ರೀಂ' ನ್ಯಾಯಮೂರ್ತಿ
author img

By

Published : Dec 13, 2022, 4:17 PM IST

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ನಡೆದ ಬಿಲ್ಕಿಸ್ ಬಾನು ಪ್ರಕರಣ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಹಿಂದೆ ಸರಿದಿದ್ದಾರೆ.

2002ರ ಗುಜರಾತ್ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಒಂದೇ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ಅಪರಾಧಿಗಳನ್ನು ಗುಜರಾತ್​ ಸರ್ಕಾರ ಬಿಡುಗಡೆ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಸುಪ್ರೀಂಕೋರ್ಟ್​ಗೆ ಮೊರೆ ಹೋಗಿದ್ದರು.

ಇಂದು ಸುಪ್ರೀಂನಲ್ಲಿ ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ತ್ರಿವೇದಿ ಅವರ ಪೀಠವು ಈ ಅರ್ಜಿನ್ನು ವಿಚಾರಣೆಗೆ ಕೈಗೆತ್ತಿಕೊಂಡ ತಕ್ಷಣ, ನ್ಯಾ.ರಸ್ತೋಗಿ ಅವರು ನ್ಯಾ.ಬೇಲಾ ಎಂ ತ್ರಿವೇದಿ ಅವರು ಈ ಪ್ರಕರಣವನ್ನು ಆಲಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ನಮ್ಮಲ್ಲಿ ಒಬ್ಬರು ಸದಸ್ಯರಲ್ಲದ ಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡಿ ಎಂದೂ ನ್ಯಾ.ರಸ್ತೋಗಿ ನೇತೃತ್ವದ ಪೀಠ ಆದೇಶಿಸಿದೆ. ಆದರೆ, ನ್ಯಾ.ಬೇಲಾ ತ್ರಿವೇದಿ ಅವರು ಅರ್ಜಿ ವಿಚಾರಣೆ ಮಾಡಲು ನಿರಾಕರಣೆ ಕುರಿತಾದ ನಿರ್ದಿಷ್ಟವಾದ ಯಾವುದೇ ಕಾರಣವನ್ನು ಪೀಠವು ತಿಳಿಸಿಲ್ಲ.

ಇದನ್ನೂ ಓದಿ: ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.