ETV Bharat / bharat

ಸೆಂಟ್ರಲ್​ ಗವರ್ನಮೆಂಟ್​​​ ಸುಗ್ರೀವಾಜ್ಞೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ: ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ

ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳು ಮತ್ತು ಸೇವೆಗಳ ಮೇಲಿನ ನಿಯಂತ್ರಣವನ್ನು ಮರಳಿ ಪಡೆಯುವ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಸುಗ್ರೀವಾಜ್ಞೆಗೆ ತಡೆಯಾಜ್ಞೆ ನೀಡಲು ನ್ಯಾಯಾಲಯ ನಿರಾಕರಿಸಿದ್ದು, ಮುಂದಿನ ವಾರ ಮತ್ತೆ ಅರ್ಜಿಯ ವಿಚಾರಣೆ ನಡೆಸಲಿದೆ. ಕೇಂದ್ರದ ಸುಗ್ರೀವಾಜ್ಞೆ ಅಸಾಂವಿಧಾನಿಕವಾಗಿದ್ದು, ಅದನ್ನು ತಕ್ಷಣವೇ ತಡೆಹಿಡಿಯಬೇಕು ಎಂದು ದೆಹಲಿ ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿತ್ತು.

Supreme court
ಸುಪ್ರೀಂ ಕೋರ್ಟ್
author img

By

Published : Jul 10, 2023, 8:05 PM IST

ನವದೆಹಲಿ: ಮೇ 19, 2023 ರಂದು ಜಾರಿಮಾಡಲಾದ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆ, 2023 ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್ ನರಸಿಂಹ ಅವರ ಪೀಠವು ಕೇಂದ್ರದಿಂದ ಪ್ರತಿಕ್ರಿಯೆ ಕೋರಿದೆ ಮತ್ತು ಸುಗ್ರೀವಾಜ್ಞೆಗೆ ತಡೆಯಾಜ್ಞೆಗಾಗಿ ಮನವಿ ಪರಿಗಣಿಸಲು ಜು.17ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ದೆಹಲಿ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಗ್ರೀವಾಜ್ಞೆ ಸೆಕ್ಷನ್ 45ಕೆಯಂತಹ ನಿಬಂಧನೆಗಳನ್ನು ಉಲ್ಲೇಖಿಸಿ ಅವರು ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅವರಿಗೆ ಅತಿಕ್ರಮಣ ಅಧಿಕಾರ ನೀಡುತ್ತಿದ್ದಾರೆ ಮತ್ತು ಸುಗ್ರೀವಾಜ್ಞೆ ಸುಪ್ರೀಂಕೋರ್ಟ್ ತೀರ್ಪಿನ ಆಧಾರ ಸ್ತಂಭಗಳಿಗೆ ವಿರುದ್ಧವಾಗಿದೆ. ಸುಗ್ರೀವಾಜ್ಞೆ ಚುನಾಯಿತ ಸರ್ಕಾರ ಮತ್ತು ಮುಖ್ಯಮಂತ್ರಿ ಅಧಿಕಾರಕ್ಕೆ ಧಕ್ಕೆ ತಂದಿದೆ ಎಂದು ವಾದ ಮಂಡಿಸಿದರು.

ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದ ಆಮ್ ಆದ್ಮಿ ಸರ್ಕಾರ: ಸುಗ್ರೀವಾಜ್ಞೆಯು ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ಗೆ ರಾಷ್ಟ್ರ ರಾಜಧಾನಿಯಲ್ಲಿನ ನಾಗರಿಕ ಸೇವೆಗಳ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳನ್ನು ಮೇಲ್ವಿಚಾರಣೆ ಮಾಡುವ ಅಧಿಕಾರವನ್ನು ನೀಡುತ್ತದೆ. ಕೇಂದ್ರದ ಸುಗ್ರೀವಾಜ್ಞೆ "ಅಸಂವಿಧಾನಿಕ" ಎಂದು ಆಮ್ ಆದ್ಮಿ ಪಕ್ಷದ ಸರ್ಕಾರ ಸುಪ್ರೀಂ ಕೋರ್ಟ್‌ನ ಮೊರೆ ಹೋಗಿತ್ತು.

"ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆ, 2023 ಅನ್ನು ಮೇ 19, 2023 ರಂದು ಕೇಂದ್ರ ಅಧಿಸೂಚನೆ ಹೊರಡಿಸಿತ್ತು. ಇದು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ(GNCTD-Government of National Capital Territory of Delhi ) ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ನಾಗರಿಕ ಸೇವಕರ ಮೇಲೆ ಜಿಎನ್​ಸಿಟಿಡಿಯಿಂದ ಚುನಾಯಿತರಾಗದ ಲೆಫ್ಟಿನೆಂಟ್ ಗವರ್ನರ್ (LG) ನಿಯಂತ್ರಣವನ್ನು ಕಸಿದುಕೊಳ್ಳುತ್ತದೆ. ಇದು ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡಲು ಬಯಸದೆ ಹಾಗೆ ಮಾಡುತ್ತದೆ. ನಿರ್ದಿಷ್ಟವಾಗಿ ಸಂವಿಧಾನದ 239 AA ಪರಿಚ್ಛೇದ, ಸೇವೆಗಳಿಗೆ ಸಂಬಂಧಿಸಿದಂತೆ ಅಧಿಕಾರ ಮತ್ತು ನಿಯಂತ್ರಣವು ಚುನಾಯಿತ ಸರ್ಕಾರಕ್ಕೆ ನಿವೇದಿತವಾಗಬೇಕು ಎಂಬ ಮೂಲ ಅಂಶವನ್ನು ಪರಿಗಣಿಸಿಲ್ಲ" ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆಕ್ಷೇಪಾರ್ಹ ಸುಗ್ರೀವಾಜ್ಞೆಯು ಫೆಡರಲ್, ವೆಸ್ಟ್‌ಮಿನಿಸ್ಟರ್-ಶೈಲಿಯ ಪ್ರಜಾಪ್ರಭುತ್ವ ಆಡಳಿತದ ಯೋಜನೆಯನ್ನು ನಾಶಪಡಿಸುತ್ತದೆ. ಇದು ಆರ್ಟಿಕಲ್ 239AA ನಲ್ಲಿ ಎನ್​ಸಿಟಿಡಿಗೆ ಸಾಂವಿಧಾನಿಕವಾಗಿ ಖಾತರಿಪಡಿಸುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿಯಲ್ಲಿ ದೆಹಲಿ ಸರ್ಕಾರವು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆ 2023 ಅನ್ನು ರದ್ದುಗೊಳಿಸಲು ಸೂಕ್ತ ನಿರ್ದೇಶನವನ್ನು ನೀಡುವಂತೆ ಸರ್ವೋಚ್ಛ ನ್ಯಾಯಾಲಯವನ್ನು ಒತ್ತಾಯಿಸಿದೆ.

ದೆಹಲಿಯಲ್ಲಿ ಐಎಎಸ್ ಮತ್ತು ಡ್ಯಾನಿಕ್ಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮತ್ತು ನಿಯೋಜಿಸಲು ಅಧಿಕಾರವನ್ನು ಹೊಂದಲು ಕೇಂದ್ರ ಸರ್ಕಾರ ಮೇ 19 ರಂದು ಸುಗ್ರೀವಾಜ್ಞೆ ಜಾರಿ ಮಾಡಿತ್ತು. ದೆಹಲಿ ಸರ್ಕಾರವು ಈ ಕ್ರಮವನ್ನು ಸೇವೆಗಳ ನಿಯಂತ್ರಣದ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆ ಎಂದು ಕರೆದಿದೆ. 1991ರ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ ಕಾಯಿದೆಗೆ ತಿದ್ದುಪಡಿ ಮಾಡಲು ಸುಗ್ರೀವಾಜ್ಞೆ ತರಲಾಗಿದೆ.

ಗ್ರೂಪ್-ಎ ಅಧಿಕಾರಿಗಳ ವಿರುದ್ಧ ಸುಪ್ರೀಂ ಕೋರ್ಟ್ ದೆಹಲಿಯಲ್ಲಿ ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿ ಹೊರತುಪಡಿಸಿ ಸೇವೆಗಳ ನಿಯಂತ್ರಣವನ್ನು ಚುನಾಯಿತ ಸರ್ಕಾರಕ್ಕೆ ಹಸ್ತಾಂತರಿಸಿದ ಒಂದು ವಾರದ ನಂತರ, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಜಾರಿಗೆ ತಂದಿತ್ತು. ಮೇ 11 ರಂದು, ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ದೆಹಲಿ ಸರ್ಕಾರದ ನಡುವಿನ ಆಡಳಿತಾತ್ಮಕ ಅಧಿಕಾರಗಳ ವಿಭಜನೆಯನ್ನು ಗೌರವಿಸಬೇಕು ಎಂದು ತೀರ್ಪು ನೀಡಿ ಆದೇಶಿಸಿತ್ತು. ದೆಹಲಿ ಸರ್ಕಾರವು ಅಧಿಕಾರಶಾಹಿಗಳು ಸೇರಿದಂತೆ ರಾಷ್ಟ್ರ ರಾಜಧಾನಿಯಲ್ಲಿ ಸೇವೆಗಳ ಮೇಲೆ ಶಾಸಕಾಂಗ ಮತ್ತು ಕಾರ್ಯಕಾರಿ ಅಧಿಕಾರ ಹೊಂದಿದೆ ಎಂದು ಹೇಳಿತ್ತು.

"ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ( ಎನ್​ಆರ್​ಸಿ) ದ ಕೇಂದ್ರ ಮತ್ತು ಸರ್ಕಾರದ ನಡುವಿನ ಆಡಳಿತಾತ್ಮಕ ಅಧಿಕಾರಗಳ ಹಂಚಿಕೆ ( NCTD) ವಿವರಿಸಿದಂತೆ ಗೌರವಿಸಬೇಕು" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಂಆರ್ ಶಾ, ಜಸ್ಟಿಸ್ ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರನ್ನು ಒಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಹೇಳಿತ್ತು. ಸುಪ್ರೀಂ ಕೋರ್ಟ್ ತನ್ನ 105 ಪುಟಗಳ ತೀರ್ಪಿನಲ್ಲಿ ದೆಹಲಿ ಸರ್ಕಾರವು ಇತರ ಕೇಂದ್ರಾಡಳಿತ ಪ್ರದೇಶಗಳಂತೆಯೇ ಇಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಹೋರಾಟ: ಸಿಎಂ ಕೇಜ್ರಿವಾಲ್​ಗೆ ಸೀತಾರಾಂ ಯೆಚೂರಿ ಬೆಂಬಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.