ETV Bharat / bharat

ನೀಟ್‌ ಪರೀಕ್ಷಾ ಕೇಂದ್ರ ಬದಲಾಯಿಸುವ ಬಗ್ಗೆ ಕೇಂದ್ರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನೀಟ್ ಪರೀಕ್ಷೆಯ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

sc refuses to change centres in neet exams says pandemic not the same as before
ಅಭ್ಯರ್ಥಿಗಳು ನೀಟ್‌ ಪರೀಕ್ಷಾ ಕೇಂದ್ರ ಬದಲಾಯಿಸುವ ಬಗ್ಗೆ ಕೇಂದ್ರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ - ಸುಪ್ರೀಂ ಕೋರ್ಟ್‌
author img

By

Published : Sep 9, 2021, 10:13 PM IST

ನವದೆಹಲಿ: ನೀಟ್‌ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸುವ ಬಗ್ಗೆ ಕೇಂದ್ರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್, ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ನ್ಯಾ.ಯು.ಲಲಿತ್, ನ್ಯಾ.ಎಸ್.ರವೀಂದ್ರ ಭಟ್ ಹಾಗೂ ನ್ಯಾ.ಬೇಲಾ ಎಂ.ತ್ರಿವೇದಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ನೀಟ್ ಪಿಜಿ ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿತು.

ಪರೀಕ್ಷೆಗೆ ಬಹಳ ದೂರ ಪ್ರಯಾಣಿಸಬೇಕು ಎಂದು ಅರ್ಜಿದಾರರು ಕೋರ್ಟ್‌ಗೆ ಮನವರಿಕೆ ಮಾಡುವ ಪ್ರಯತ್ನ ನಡೆಸಿದರು. ಈ ಕುರಿತ ವಾದ ಆಲಿಸಿದ ನ್ಯಾಯಪೀಠ, ಪ್ರಸ್ತುತ ದೇಶದಲ್ಲಿ ಎಲ್ಲವೂ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ನೆನಪಿಸಿತು. ಅಭ್ಯರ್ಥಿಗಳು ಎಲ್ಲಿ ಬೇಕಾದರೂ ಸುಲಭವಾಗಿ ಹೋಗಬಹುದು. ಈಗ ಯಾವುದೇ ನಿರ್ಬಂಧಗಳಿಲ್ಲ. ನೀವು ಯಾವುದೇ ವಿಮಾನ ನಿಲ್ದಾಣಕ್ಕೆ ಹೋದರೂ ವಿಮಾನದಲ್ಲಿ ಸೀಟ್ ಪಡೆಯಬಹುದು. ಜನರು ದೆಹಲಿಯಿಂದ ಚೆನ್ನೈಗೆ ಹೋಗಬಹುದು. ಅವರು ದೆಹಲಿಯಿಂದ ಕೊಚ್ಚಿಗೆ ಹೋಗಬಹುದು ಎಂದು ಕೋರ್ಟ್‌ ಹೇಳಿದೆ.

ಆದರೆ, ಅರ್ಜಿದಾರರ ಪರ ಹಾಜರಾಗಿದ್ದ ಹಿರಿಯ ವಕೀಲೆ ಮೀನಾಕ್ಷಿ ಆರೋರಾ, ಅಭ್ಯರ್ಥಿಗಳು ದೆಹಲಿಯಿಂದ ಕೇರಳಕ್ಕೆ ಪ್ರಯಾಣಿಸಬೇಕೆಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಕೇರಳದಿಂದ ದೆಹಲಿಗೆ ವಿಮಾನಗಳು ಹಾರಾಟ ನಡೆಸುತ್ತಿವೆ ಎಂದಿದೆ. ಕೋವಿಡ್‌ ಏಪ್ರಿಲ್, ಮೇನಲ್ಲಿರುವಂತೆ ಪರಿಣಾಮ ಬೀರಿಲ್ಲ. ಕೇರಳದಲ್ಲಿ ಹೆಚ್ಚಿನ ಸಂಖ್ಯೆಯ ಕೊರೊನಾ ಪ್ರಕರಣಗಳ ಹೊರತಾಗಿಯೂ, ಅಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: NEET ನಲ್ಲಿ ಹಿಂದುಳಿದ ವರ್ಗಗಗಳಿಗೆ ಮೀಸಲು ಕಲ್ಪಿಸಿ:ಪ್ರಧಾನಿಗೆ ಸಂಸದರ ನಿಯೋಗದ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.