ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ಆರೋಪ ಸಂಬಂಧ ಸಿಬಿಐನಂತಹ ಸ್ವತಂತ್ರ ತನಿಖಾ ಸಂಸ್ಥೆ ತನಿಖೆ ನಡೆಸಲು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ವಿಧಾನಸಭೆ ಚುನಾವಣೆ ಹಿನ್ನೆಲೆ ಮಾರ್ಚ್ 10ರಂದು ತಾವು ಸ್ಪರ್ಧಿಸುತ್ತಿರುವ ನಂದಿಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದ ವೇಳೆ ಅಪರಿಚಿತ ಜನರಿಂದ ತಳ್ಳಲ್ಪಟ್ಟು ಮಮತಾ ಬ್ಯಾನರ್ಜಿ ಅವರು ಗಾಯಗೊಂಡಿದ್ದರು. ದೀದಿಯ ಎಡಗಾಲಿಗೆ ಮತ್ತು ಸೊಂಟಕ್ಕೆ ಗಾಯಗಳಾಗಿದ್ದು, ಯಾರೋ ಬೇಕೆಂತಲೇ ಕೃತ್ಯ ಎಸಗಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆರೋಪಿಸಿತ್ತು.
ಇದನ್ನೂ ಓದಿ: ಏ.23ರ ವರೆಗೆ ಸಚಿನ್ ವಾಜೆ ನ್ಯಾಯಾಂಗ ಬಂಧನಕ್ಕೆ
ಈ ಬಗ್ಗೆ ತನಿಖೆ ನಡೆಸಲು ಕೇಂದ್ರದ ಸ್ವತಂತ್ರ ತನಿಖಾ ಸಂಸ್ಥೆಗೆ ಸೂಚಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ನಡೆಸಿತು. ನಿಮ್ಮ ಅರ್ಜಿಯನ್ನು ಹಿಂಪಡೆದು, ಕೋಲ್ಕತ್ತಾ ಹೈಕೋರ್ಟ್ ಸಂಪರ್ಕಿಸಲು ಅರ್ಜಿದಾರರ ಪರ ಹಾಜರಾದ ವಕೀಲರಿಗೆ ತಿಳಿಸಿತು.