ನವದೆಹಲಿ: ಮೀಡಿಯಾ ಒನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶ ಕಾಯ್ದಿರಿಸಿದೆ. ರಾಷ್ಟ್ರೀಯ ಭದ್ರತೆಯ ಕಾರಣಗಳನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ ಎಲ್ಲ ಪ್ರಕರಣಗಳಲ್ಲಿ 'ಸ್ಟ್ರೇಟ್ ಜಾಕೆಟ್‘ ಸೂತ್ರವನ್ನು ಅನ್ವಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಇದೇ ವೇಳೆ ಅಭಿಪ್ರಾಯಪಟ್ಟಿದೆ.
ಪ್ರಕರಣದ ಸಂಬಂಧ ಕೇಂದ್ರ ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ತನ್ನ ಅಭಿಪ್ರಾಯ ನೀಡಿತ್ತು. ಕೇಂದ್ರ ಸರ್ಕಾರವು ದೇಶದ ಭದ್ರತೆ ಕಾರಣ ಒಡ್ಡಿ ಮೀಡಿಯಾ ಒನ್ ಪ್ರಸಾರವನ್ನು ಸ್ಥಗಿತಗೊಳಿಸಿತ್ತು. ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಪ್ರಶ್ನಿಸಿ, ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ್ದ ಕೇರಳ ಹೈಕೋರ್ಟ್ ಮಲಯಾಳಂ ಸುದ್ದಿ ವಾಹಿನಿಯ ಪ್ರಸಾರವನ್ನು ನಿಷೇಧಿಸುವ ಕೇಂದ್ರದ ನಿರ್ಧಾರ ವನ್ನು ಎತ್ತಿಹಿಡಿದಿತ್ತು. ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಮೀಡಿಯಾ ಒನ್ ಅನ್ನು ನಿರ್ವಹಿಸುವ ಮಾಧ್ಯಮಮ್ ಬ್ರಾಡ್‌ಕಾಸ್ಟಿಂಗ್ ಲಿಮಿಟೆಡ್‌ನ ಮನವಿಯನ್ನು ವಜಾಗೊಳಿಸಿತ್ತು.
ಇದನ್ನು ಓದಿ: ರಸ್ತೆ ಬದಿಗಳಲ್ಲಿ ಕೆಲಸ ಮಾಡುವ ಮಕ್ಕಳ ಕಲ್ಯಾಣಕ್ಕಾಗಿ ಮತ್ತೊಮ್ಮೆ ಸಭೆ ಮಾಡಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ