ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಬಡ್ತಿಯಲ್ಲಿ ಮೀಸಲು ನೀಡುವ ವಿಷಯದ ಕುರಿತು ಸುಪ್ರೀಂಕೋರ್ಟ್ ತನ್ನ ತೀರ್ಪು ಕಾಯ್ದಿರಿಸಿದೆ.
ನ್ಯಾಯಮೂರ್ತಿ ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್, ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಬಲ್ಬೀರ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಪರವಾಗಿ ಹಾಜರಾಗಿದ್ದರು. ಹಾಗೆ ಇತರ ಹಿರಿಯ ವಕೀಲರು ಸೇರಿದಂತೆ ಎಲ್ಲ ಕಕ್ಷಿದಾರರ ವಾದವನ್ನು ಪೀಠ ಆಲಿಸಿತು.
ಸುಮಾರು 75 ವರ್ಷಗಳ ನಂತರವೂ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದವರನ್ನು ಮುಂದುವರಿದ ವರ್ಗದ ಅರ್ಹತೆಯ ಮಟ್ಟಕ್ಕೆ ತರಲಾಗಿಲ್ಲ ಎಂಬುದು ಜೀವನದ ಸತ್ಯ ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ಬಿ ಆರ್ ಗವಾಯಿ ಅವರನ್ನೊಳಗೊಂಡ ಪೀಠಕ್ಕೆ ಕೇಂದ್ರವು ಈ ಹಿಂದೆ ತಿಳಿಸಿತ್ತು.
ಎಸ್‌ಸಿ ಮತ್ತು ಎಸ್‌ಟಿಗಳಿಗೆ ಸೇರಿದ ಸಮುದಾಯದವರು ಎ ಗುಂಪಿನ ಉದ್ಯೋಗಗಳಲ್ಲಿ ಅರ್ಹತೆ ಪಡೆಯುವುದು ಹೆಚ್ಚು ಕಷ್ಟಕರವಾಗಿದೆ ಎಂದು ವೇಣುಗೋಪಾಲ್ ಅರ್ಜಿ ಸಲ್ಲಿಕೆ ಮಾಡಿದ್ದರು.
ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಬಡ್ತಿಯಲ್ಲಿ ಮೀಸಲು ನೀಡುವ ವಿಷಯದ ಕುರಿತು ತನ್ನ ನಿರ್ಧಾರವನ್ನು ಮತ್ತೆ ಪ್ರಕಟಿಸುವುದಿಲ್ಲ ಎಂದು ಪೀಠವು ಈ ಹಿಂದೆ ಹೇಳಿತ್ತು ಮತ್ತು ಅದನ್ನು ಹೇಗೆ ಜಾರಿಗೆ ತರಬೇಕು ಎಂಬುದನ್ನು ರಾಜ್ಯಗಳು ನಿರ್ಧರಿಸಬೇಕು ಎಂದು ಹೇಳಿತ್ತು.