ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ಹರಡುವಿಕೆಯನ್ನು ರಾಷ್ಟ್ರೀಯ ಬಿಕ್ಕಟ್ಟು ಎಂದು ಹೇಳಿರುವ ಸುಪ್ರೀಂಕೋರ್ಟ್, ಇಂಥ ಸಮಯದಲ್ಲಿ ತಾನು ಮೂಕಪ್ರೇಕ್ಷಕನಾಗಿರಲು ಸಾಧ್ಯವಿಲ್ಲ ಹಾಗೂ ಕೋವಿಡ್ ನಿರ್ವಹಣೆ ಕುರಿತಾಗಿ ತಾನು ಸ್ವಯಂ ಪ್ರೇರಿತವಾಗಿ ಕೈಗೊಂಡ ಕ್ರಮಗಳು ಹೈಕೋರ್ಟ್ಗಳ ಅಧಿಕಾರವನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿಲ್ಲ ಎಂದಿದೆ.
ಹೈಕೋರ್ಟ್ಗಳು ತಮ್ಮ ಪ್ರಾದೇಶಿಕ ವ್ಯಾಪ್ತಿಯಲ್ಲಿನ ಕೋವಿಡ್ ಸಂಬಂಧಿತ ಪ್ರಕರಣಗಳ ವಿಚಾರಣೆಗಳನ್ನು ನಡೆಸಲು ಹೆಚ್ಚು ಸೂಕ್ತವಾಗಿವೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
"ನಾವು ಕೇವಲ ಹೆಚ್ಚುವರಿ ಸಹಕಾರಿಯಾಗಿ ಕೆಲಸ ಮಾಡುತ್ತಿದ್ದೇವೆ. ಪ್ರಾದೇಶಿಕ ಗಡಿಗಳ ಸೀಮಿತ ವ್ಯಾಪ್ತಿಯ ಕಾರಣದಿಂದ ಹೈಕೋರ್ಟ್ಗಳು ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿದ್ದಲ್ಲಿ ಸಹಾಯಕ್ಕೆ ನಾವು ಸಿದ್ಧರಿದ್ದೇವೆ." ಎಂದು ಎಲ್. ನಾಗೇಶ್ವರ್ ರಾವ್ ಹಾಗೂ ಎಸ್. ರವೀಂದ್ರ ಭಟ್ ಅವರಿದ್ದ ಪೀಠ ಸ್ಪಷ್ಟಪಡಿಸಿದೆ.