ನವದೆಹಲಿ: ಆಧಾರ್ ಕಾರ್ಡ್ ಜತೆ ಲಿಂಕ್ ಇಲ್ಲದಿರುವ 3 ಕೋಟಿ ಪಡಿತರ ಚೀಟಿಗಳನ್ನು ರದ್ದುಪಡಿಸುವ ವಿರುದ್ಧ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿ ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಸಿಜೆಐ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು, ಈ ವಿಷಯವು ತುಂಬಾ ಗಂಭೀರವಾಗಿದೆ. ಇದು ಆಧಾರ್ ಒಳಗೊಂಡಿರುವುದರಿಂದ ಕೇಂದ್ರದ ಪ್ರತಿಕ್ರಿಯೆ ಕೇಳಲು ಬಯಸುತ್ತೇವೆ ಎಂದಿದೆ.
ಇದನ್ನೂ ಓದಿ: ಟೆಸ್ಟಿಂಗ್ ಹೆಚ್ಚಿಸಿ, ಜನರು ಆತಂಕಗೊಳ್ಳದಂತೆ ತಕ್ಷಣ ಕ್ರಮ ಕೈಗೊಳ್ಳಿ: ಸಿಎಂಗಳಿಗೆ ಮೋದಿ ಮಹತ್ವದ ಸೂಚನೆ
ಮೂರು ಕೋಟಿ ಕಾರ್ಡ್‌ಗಳನ್ನು ರದ್ದುಪಡಿಸುವುದು ಮತ್ತು ಹಸಿವಿನಿಂದ ಸಾವನ್ನಪ್ಪುವುದು ಇಲ್ಲಿ ಪ್ರಮುಖ ವಿಷಯವಾಗಿದೆ ಎಂದು ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ನ್ಯಾಯಾಲಯಕ್ಕೆ ತಿಳಿಸಿದರು.
ಈ ವಿಷಯದ ಬಗ್ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯಿಸಲು ಸಿಜೆಐ ಕೇಂದ್ರಕ್ಕೆ ಸೂಚಿಸಿದ್ದಾರೆ.