ETV Bharat / bharat

ದೇಶಾದ್ಯಂತ ಏಕರೂಪದ ಆರ್​ಟಿ - ಪಿಸಿಆರ್​ ದರ ನಿಗದಿ: ಕೇಂದ್ರದ ಸ್ಪಷ್ಟನೆ ಕೇಳಿದ ಸುಪ್ರೀಂಕೋರ್ಟ್​

author img

By

Published : Nov 24, 2020, 2:31 PM IST

ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್ ಎಸ್ ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರಿದ್ದ ನ್ಯಾಯಪೀಠವು ಆರೋಗ್ಯ ಸಚಿವಾಲಯಕ್ಕೆ ಸ್ಪಷ್ಟನೆ ಕೇಳಿ ನೋಟಿಸ್ ನೀಡಿದೆ. ಎರಡು ವಾರಗಳ ನಂತರ ವಿಚಾರಣೆಗೆ ಬರುವಂತೆ ಸೂಚಿಸಿದೆ.

SC
ಎಸ್​​ಸಿ

ನವದೆಹಲಿ: ದೇಶಾದ್ಯಂತ ಕೋವಿಡ್​ -19ನ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಗರಿಷ್ಠ ದರ ನಿಗದಿಪಡಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿದ ನ್ಯಾಯಪೀಠ, ಕೋವಿಡ್ -19 ಚಿಕಿತ್ಸೆಯ ವೆಚ್ಚಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಾಕಿ ಇರುವ ಮನವಿಯೊಂದಿಗೆ ವಿಚಾರಣೆ ನಡೆಸಲಾಗುವುದು ಎಂದು ಹೇಳಿತು.

ಆರ್‌ಟಿ-ಪಿಸಿಆರ್ (ರಿಯಲ್-ಟೈಮ್ ರಿವರ್ಸ್ ಟ್ರಾನ್ಸ್‌ಸ್ಕ್ರಿಪ್ಷನ್-ಪಾಲಿಮರೇಸ್ ಚೈನ್ ರಿಯಾಕ್ಷನ್) ಪರೀಕ್ಷೆಯ ಗರಿಷ್ಠ ದರ ದೇಶಾದ್ಯಂತ 400 ರೂ.ಗೆ ಏಕರೂಪವಾಗಿ ನಿಗದಿಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಇದರ ಬದಲಿಗೆ ದೇಶದ ಬೇರೆ-ಬೇರೆ ರಾಜ್ಯಗಳಲ್ಲಿ 900 ರಿಂದ 2800 ರೂ. ತನಕ ನಿಗದಿಪಡಿಸಲಾಗುತ್ತಿದೆ.

ತಿರುಪತಿಗೆ ರಾಷ್ಟ್ರಪತಿ ಭೇಟಿ: ಲಾರ್ಡ್ ವೆಂಕಟೇಶ್ವರನ ದರ್ಶನ ಪಡೆದ ಕೋವಿಂದ್

ಪ್ರಯೋಗಾಲಯಗಳಿಂದ ದೊಡ್ಡ ಪ್ರಮಾಣದಲ್ಲಿ ಲೂಟಿ ಮಾಡಲಾಗುತ್ತಿದೆ. ಲಾಭದ ಅಂಚು ತುಂಬಾ ಹೆಚ್ಚಾಗಿದ್ದು, ಆಂಧ್ರಪ್ರದೇಶದಲ್ಲಿ ಶೇ 1400ರಷ್ಟು ಮತ್ತು ದೆಹಲಿಯಲ್ಲಿ ಶೇ 1200ರಷ್ಟಿದೆ ಎಂದು ವಕೀಲ ಅಜಯ್ ಅಗ್ರವಾಲ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಲಾಗಿದೆ.

ಆರ್‌ಟಿ-ಪಿಸಿಆರ್ ಕಿಟ್‌ಗಳು ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ 200 ರೂಪಾಯಿಗಿಂತ ಕಡಿಮೆ ದರದಲ್ಲಿ ಲಭ್ಯವಿದೆ ಎಂದು ಪೀಠದ ಗಮನಕ್ಕೆ ತಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.