ನವದೆಹಲಿ: ಕೋವಿಡ್ ನಿಯಮ ಪಾಲನೆ ಮಾಡದವರು ಕೋವಿಡ್ ರೋಗಿಗಳ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಬೇಕು ಎಂದು ತಂದಿದ್ದ ಆದೇಶವನ್ನು ಸುಪ್ರೀಂಕೋರ್ಟ್ ತಡೆಹಿಡಿದಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಸುಭಾಷ್ ರೆಡ್ಡಿ ಮತ್ತು ಎಂ ಆರ್ ಷಾ ಅವರ ನ್ಯಾಯಪೀಠವು, ಗುಜರಾತ್ ಸರ್ಕಾರದ ಮನವಿ ಗಮನದಲ್ಲಿಟ್ಟುಕೊಂಡು ಆದೇಶವು ಕಠಿಣವಾಗಿದೆ. ಇದು ಗಂಭೀರ ಪರಿಣಾಮಗಳನ್ನು ಬೀರುತ್ತದೆ ಎಂದು ಹೇಳಿದೆ.
ಹೆಚ್ಚಿನ ಮಾಹಿತಿಗೆ ಈ ಸುದ್ದಿ ಓದಿ: ಮಾಸ್ಕ್ ಧರಿಸದವರು ಕೋವಿಡ್ ಕೇಂದ್ರದಲ್ಲಿ ಕೆಲಸ ಮಾಡಬೇಕು: ಗುಜರಾತ್ ಹೈಕೋರ್ಟ್
ಇನ್ನು ರಾಜ್ಯದಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಸೂಕ್ಷ್ಮವಾಗಿ ಅನುಸರಿಸುತ್ತಿಲ್ಲ ಎಂಬ ಬಗ್ಗೆಯೂ ಉನ್ನತ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಮಾಸ್ಕ್ ಧರಿಸುವುದರ ಜೊತೆಗೆ ಸಾಮಾಜಿಕ ಅಂತರದ ಬಗ್ಗೆ ಕೇಂದ್ರ ಮತ್ತು ಗುಜರಾತ್ ಅಧಿಕಾರಿಗಳು ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೇ ಎಂದು ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಖಚಿತಪಡಿಸಿಕೊಳ್ಳಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ.