ETV Bharat / bharat

₹12,000 ಕೋಟಿ ಠೇವಣಿ: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶಕ್ಕೆ ಸುಪ್ರೀಂ ತಡೆ

ಮಹಾರಾಷ್ಟ್ರ ಸರ್ಕಾರಕ್ಕೆ ₹ 12000 ಕೋಟಿ ಠೇವಣಿ ಇಡಲು ಆದೇಶಿಸಿದ್ದ ಹಸಿರು ನ್ಯಾಯ ಮಂಡಳಿ ಆದೇಶಕ್ಕೆ ಸುಪ್ರೀಂ ತಡೆ ನೀಡಿದೆ.

ಹಸಿರು ನ್ಯಾಯಮಂಡಳಿ ಆದೇಶಕ್ಕೆ ಸುಪ್ರೀಂ ತಡೆ
ಹಸಿರು ನ್ಯಾಯಮಂಡಳಿ ಆದೇಶಕ್ಕೆ ಸುಪ್ರೀಂ ತಡೆ
author img

By ETV Bharat Karnataka Team

Published : Nov 28, 2023, 9:19 PM IST

ನವದೆಹಲಿ: ಘನ ಮತ್ತು ದ್ರವ ತ್ಯಾಜ್ಯದ ಅಸಮರ್ಪಕ ನಿರ್ವಹಣೆಗಾಗಿ ಪರಿಹಾರವಾಗಿ 12,000 ಕೋಟಿ ರೂಪಾಯಿಗಳನ್ನು ಠೇವಣಿ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಆದೇಶಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಎನ್​ಜಿಟಿ ಆದೇಶ ಪ್ರಶ್ನಿಸಿ ಕಳೆದ ವರ್ಷ ನವೆಂಬರ್​ ತಿಂಗಳಲಿನಲ್ಲಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿ ಜೆ. ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ಎನ್​ಜಿಟಿ ನೀಡಿರುವ ಆದೇಶಕ್ಕೆ ತಡೆ ನೀಡಲಾಗುವುದು ಎಂದು ಹೇಳಿ ಈ ಆದೇಶ ಮಾಡಿತು.

ಮಹಾರಾಷ್ಟ್ರ ಸರ್ಕಾರದ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟಗಿ ನ್ಯಾಯ ಪೀಠದ ಮುಂದೆ ತಮ್ಮ ವಾದ ಮಂಡಿಸಿದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಸ್‌ಟಿಪಿಗೆ ಟೆಂಡರ್ ನೀಡಿದ್ದು, ಕೆಲಸ ನಡೆಯುತ್ತಿದೆ. ಆದರೂ ಎನ್‌ಜಿಟಿ ಇಷ್ಟು ದೊಡ್ಡ ಮೊತ್ತದ ದಂಡ ವಿಧಿಸಿದೆ ಎಂದು ವಾದ ಮಂಡಿಸಿದರು. ಇಷ್ಟೊಂದು ದಂಡ ಪಾವತಿಸುವುದು ಕಷ್ಟ ಎಂಬುದನ್ನು ಪೀಠಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದರು. ಅಂತಿಮವಾಗಿ ವಾದ ಪ್ರತಿವಾದ ಆಲಿಸಿದ ಕೋರ್ಟ್​ ಹಸಿರು ನ್ಯಾಯಮಂಡಳಿ ಆದೇಶಕ್ಕೆ ತಡೆ ನೀಡಿ ಆದೇಶ ಮಾಡಿತು.

ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಸೆಪ್ಟೆಂಬರ್ 10 ರಂದು, ಘನ ಮತ್ತು ದ್ರವ ತ್ಯಾಜ್ಯದ ಅಸಮರ್ಪಕ ನಿರ್ವಹಣೆಗಾಗಿ ಮತ್ತು ತ್ಯಾಜ್ಯ ನಿರ್ವಹಣೆಯಲ್ಲಿನ ಲೋಪಗಳಿಂದಾಗಿ ಪರಿಸರಕ್ಕೆ ಹಾನಿಯ ಆಗುತ್ತಿದೆ. ಇದನ್ನು ಸರಿದೂಗಿಸಲು ಎನ್‌ಜಿಟಿ ಕಾಯ್ದೆಯ ಸೆಕ್ಷನ್ 15ರ ಅಡಿಯಲ್ಲಿ ಪರಿಹಾರವನ್ನು ನೀಡುವುದು ಅಗತ್ಯ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತನ್ನ ಆದೇಶದಲ್ಲಿ ಹೇಳಿತ್ತು. ಅಷ್ಟೇ ಅಲ್ಲ 12,000 ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಠೇವಣಿ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಎನ್​ಜಿಟಿ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್, ನ್ಯಾಯಮೂರ್ತಿ ಸುಧೀರ್ ಅಗರ್ವಾಲ್ ಪೀಠವು ಆದೇಶ ನೀಡಿತ್ತು.

ಕಳೆದ ವರ್ಷ ಎನ್‌ಜಿಟಿ ಮಹಾರಾಷ್ಟ್ರ ಸರ್ಕಾರಕ್ಕೆ 12 ಸಾವಿರ ಕೋಟಿ ರೂಪಾಯಿ ದಂಡ ವಿಧಿಸಿತ್ತು. ಇನ್ನು ಇತ್ತೀಚೆಗೆ ಬಂಗಾಳ ಸರ್ಕಾರಕ್ಕೂ 3,500 ಕೋಟಿ ರೂಪಾಯಿ ದಂಡ ವಿಧಿಸಿ ಆದೇಶಿಸಿತ್ತು . ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯನ್ನು ನಿರ್ವಹಿಸದ ಆರೋಪದ ಮೇಲೆ ಈ ದಂಡವನ್ನು ಪಾವತಿಸುವಂತೆ ಬಂಗಾಳ ಸರ್ಕಾರಕ್ಕೆ ಹಸಿರು ನ್ಯಾಯಮಂಡಳಿ ಸೂಚಿಸಿದೆ.

ಇದನ್ನೂ ಓದಿ: ಮುಖ್ಯ ಕಾರ್ಯದರ್ಶಿ ನೇಮಕ: ದೆಹಲಿ ಸಿಎಂ - ಲೆಫ್ಟಿನೆಂಟ್ ಗವರ್ನರ್ ಸಭೆಗೆ ಸುಪ್ರೀಂಕೋರ್ಟ್​ ಸಲಹೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.