ETV Bharat / bharat

ಪಶ್ಚಿಮ ಬಂಗಾಳದ ಆಯೋಗ ನಡೆಸುತ್ತಿದ್ದ ಪೆಗಾಸಸ್​ ತನಿಖೆಗೆ ತಡೆಯಾಜ್ಞೆ ನೀಡಿದ ಸುಪ್ರೀಂಕೋರ್ಟ್​

author img

By

Published : Dec 17, 2021, 9:47 PM IST

ಪಶ್ಚಿಮ ಬಂಗಾಳ ಸರ್ಕಾರ ಪೆಗಾಸಸ್ ಗೂಢಚಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಚನೆ ಮಾಡಿದ್ದ ಆಯೋಗಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

SC stays WB commission proceedings into Pegasus matter
ಪೆಗಾಸಸ್ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರದ ಆಯೋಗಕ್ಕೆ ತಡೆಯಾಜ್ಞೆ ನೀಡಿದ ಸುಪ್ರೀಂಕೋರ್ಟ್​

ನವದೆಹಲಿ: ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಪೆಗಾಸಸ್ ಗೂಢಚಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪಶ್ಚಿಮ ಬಂಗಾಳ ಸರ್ಕಾರ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಅವರ ನೇತೃತ್ವದಲ್ಲಿ ರಚನೆ ಮಾಡಲಾಗಿದ್ದ ಆಯೋಗದ ಎಲ್ಲ ಪ್ರಕ್ರಿಯೆಗಳಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​ವಿ ರಮಣ ಅವರಿದ್ದ ತ್ರಿಸದಸ್ಯ ಪೀಠ ಈ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಈ ಪೀಠದಲ್ಲಿದ್ದರು.

ಸುಪ್ರೀಂಕೋರ್ಟ್​ ಕೂಡಾ ಪೆಗಾಸಸ್ ತನಿಖೆಗಾಗಿ ನ್ಯಾಯಮೂರ್ತಿ ಆರ್​ವಿ ರವೀಂದ್ರನ್ ನೇತೃತ್ವದ ಸಮಿತಿಯೊಂದನ್ನು ರಚನೆ ಮಾಡಿದ್ದು, ರಾಜ್ಯ ಸರ್ಕಾರವೊಂದು ಪ್ರತ್ಯೇಕವಾಗಿ ಈ ಕುರಿತು ತನಿಖೆ ಮಾಡುತ್ತಿದೆ. ಇದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಸುಪ್ರೀಂಕೋರ್ಟ್​ಗೆ ಅರ್ಜಿಯೊಂದು ಸಲ್ಲಿಕೆಯಾಗಿತ್ತು.

ಪಶ್ಚಿಮ ಬಂಗಾಳ ಸರ್ಕಾರದ ಪರ ಹಿರಿಯ ವಕೀಲ ಎಎಮ್​ ಸಿಂಗ್ವಿ ಹಾಜರಿದ್ದು, ರಾಜ್ಯ ಸರ್ಕಾರದ ತನಿಖೆಯ ಅವಶ್ಯಕತೆಯನ್ನು ಮನವರಿಕೆ ಮಾಡಿಕೊಡಲು ಯತ್ನಿಸಿದ್ದರು.

ಆದರೆ, ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಎನ್​ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ತನಿಖಾ ಆಯೋಗಕ್ಕೆ ಸಂಬಂಧಿಸಿದ ಎಲ್ಲರಿಗೂ ನೋಟಿಸ್ ಕಳುಹಿಸಿದ್ದು, ತನಿಖಾ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದೆ.

ಈಗ ಸದ್ಯಕ್ಕೆ ಸುಪ್ರೀಂಕೋರ್ಟ್ ರಚನೆ ಮಾಡಿರುವ ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ನೇತೃತ್ವದ ಸಮಿತಿ ಪೆಗಾಸಸ್ ಗೂಢಚಾರಿಕೆ ಪ್ರಕರಣವನ್ನು ತನಿಖೆ ನಡೆಸಲಿದ್ದು, ಅಲೋಕ್ ಜೋಷಿ ಮತ್ತು ಸಂದೀಪ್ ಒಬೇರಾಯ್ ಈ ಸಮಿತಿಯ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಭೂತಾನ್​ನ 'ಅತ್ಯುನ್ನತ ನಾಗರಿಕ ಪ್ರಶಸ್ತಿ' ಗೌರವ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.