ETV Bharat / bharat

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ - Etv bharat Kannada

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ 11 ಅಪರಾಧಿಗಳು ಗುಜರಾತ್ ಸರ್ಕಾರವು ಕ್ಷಮಾಪಣೆ ಮೇಲೆ ಆಗಸ್ಟ್ 15ರಂದು ಬಿಡುಗಡೆ ಮಾಡಿದೆ.

sc-to-consider-hearing-plea-against-grant-of-remission-to-11-convicts-in-bilkis-bano-case
ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
author img

By

Published : Aug 23, 2022, 7:25 PM IST

ನವದೆಹಲಿ: 2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಸಂತ್ರಸ್ತೆಯ14 ಜನ ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಇಂದು ಸಮ್ಮತಿಸಿದೆ.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಗುಜರಾತ್ ಸರ್ಕಾರವು ಕ್ಷಮಾಪಣೆ ಅನ್ವಯ ಎಲ್ಲ ಅಪರಾಧಿಗಳನ್ನು ಆಗಸ್ಟ್ 15ರಂದು ಬಿಡುಗಡೆಗೊಳಿಸಿತ್ತು. ಸರ್ಕಾರದ ಈ ನಡೆ ಬಗ್ಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿ ವಿರೋಧಕ್ಕೂ ಕಾರಣವಾಗಿದೆ. ಅಲ್ಲದೇ, ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ನ್ಯಾಯವಾದಿ ಅಪರ್ಣಾ ಭಟ್ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್, ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಸೇರಿದಂತೆ ಸುಪ್ರೀಂಕೋರ್ಟ್​ಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆಯನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕೆಂದು ನ್ಯಾಯವಾದಿ ಅಪರ್ಣಾ ಭಟ್ ಪ್ರಸ್ತಾಪಿಸಿದರು. ಇದಕ್ಕೆ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರ ನೇತೃತ್ವದ ಪೀಠವು ಸಮ್ಮತಿಸಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದೆ.

ಇದಕ್ಕೂ ಮುನ್ನ ಈ ಪ್ರಕರಣದಲ್ಲಿ ನಿರ್ಧಾರ ತೆಗೆದುಕೊಳ್ಳಲು ಸುಪ್ರೀಂಕೋರ್ಟ್​ ಸರ್ಕಾರದ ವಿವೇಚನೆಗೆ ನೀಡಿತ್ತು. ಸರ್ಕಾರವು ಅಪರಾಧಿಗಳಿಗೆ ಕ್ಷಮಾಪಣೆ ನೀಡಿರುವುದನ್ನು ನಾವು ಪ್ರಶ್ನಿಸುತ್ತಿದ್ದೇವೆಯೇ ಹೊರತು ಸುಪ್ರೀಂಕೋರ್ಟ್ ಆದೇಶವನ್ನಲ್ಲ. ಯಾವ ತತ್ವಗಳ ಆಧಾರದ ಮೇಲೆ ಕ್ಷಮಾಪಣೆ ನೀಡಲಾಗಿದೆ ಎಂದು ಪ್ರಶ್ನಿಸುತ್ತಿದ್ದೇವೆ ಎಂದು ಕಪಿಲ್ ಸಿಬಲ್ ಹೇಳಿದರು.

ಇದನ್ನೂ ಓದಿ: ಈ ನ್ಯಾಯ ಸರಿನಾ.. ಅತ್ಯಾಚಾರ ಮಾಡಿದವರ ಬಿಡುಗಡೆಗೆ ಬಿಲ್ಕಿಸ್​ ಬಾನೊ ತೀವ್ರ ಆಕ್ಷೇಪ

11 ಅಪರಾಧಿಗಳಿಗೆ ಕ್ಷಮಾದಾನ ಆದೇಶವನ್ನು ರದ್ದುಗೊಳಿಸುವಂತೆ ಮತ್ತು ತಕ್ಷಣವೇ ಮರು ಬಂಧನಕ್ಕೆ ನಿರ್ದೇಶಿಸುವಂತೆ ಕೋರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಸಾಮಾಜಿಕ ಕಾರ್ಯಕರ್ತೆ ಮತ್ತು ಪ್ರೊಫೆಸರ್ ರೂಪ್ ರೇಖಾ ವರ್ಮಾ ಕೂಡ ಅರ್ಜಿ ಸಲ್ಲಿಸಿದ್ದಾರೆ.

ಗುಜರಾತ್ ಸರ್ಕಾರದ ಸಕ್ಷಮ ಪ್ರಾಧಿಕಾರದ ಸದಸ್ಯರ ಸಮಿತಿಯು ರಾಜಕೀಯ ಪಕ್ಷವೊಂದಕ್ಕೆ ನಿಷ್ಠೆಯನ್ನು ಹೊಂದಿದೆ. ಇದರಲ್ಲಿ ಹಾಲಿ ಶಾಸಕರು ಕೂಡ ಇರುವಂತೆ ತೋರುತ್ತದೆ. ಹೀಗಾಗಿ ಸಕ್ಷಮ ಪ್ರಾಧಿಕಾರವು ಸಂಪೂರ್ಣವಾಗಿ ಸ್ವತಂತ್ರವಾಗಿರುವ ಕಾರ್ಯ ನಿರ್ವಹಿಸುವ ಅಧಿಕಾರ ಹೊಂದಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಇದನ್ನೂ ಓದಿ: ಗುಜರಾತ್ ಗೋಧ್ರಾ ಗಲಭೆ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಆರೋಪಿಗಳು ಬಿಡುಗಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.