ರಾಯ್ಪುರ/ಛತ್ತೀಸ್ಗಢ: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಾಲೆ-ಕಾಲೇಜು ಮತ್ತು ಅಂಗನವಾಡಿಗಳನ್ನು ಮುಚ್ಚಲಾಗುವುದು ಎಂದು ಸಚಿವ ರವೀಂದ್ರ ಚೌಬೆ ಹೇಳಿದ್ದಾರೆ.
ಹೋಳಿ ಹಬ್ಬದ ಹಿನ್ನೆಲೆ ವೈರಸ್ ಹರಡದಂತೆ ಕ್ರಮ ವಹಿಸಲು ಕೊರೊನಾಗೆ ಸಂಬಂಧಿಸಿದ ಎಲ್ಲಾ ಹೆಲ್ತ್ ಪ್ರೋಟೋಕಾಲ್‌ಗಳು ಕಟ್ಟುನಿಟ್ಟಾಗಿ ಜಾರಿಯಲ್ಲಿವೆಯೇ ಎಂದು ಖಚಿತಪಡಿಸಿಕೊಳ್ಳಲು ಭಾನುವಾರ ಮುಖ್ಯಮಂತ್ರಿ ಭೂಪೇಶ್ ಭಗೇಲ್ ತಮ್ಮ ಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ರವೀಂದ್ರ ಚೌಬೆ ಪಾಲ್ಗೊಂಡಿದ್ದರು.
"ಕೋವಿಡ್-19 ಪ್ರಕರಣಗಳ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ಆದೇಶದವರೆಗೆ ಎಲ್ಲಾ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಹೊರತುಪಡಿಸಿ, ಇತರ ಯಾವುದೇ ಕ್ಲಾಸ್ಗಳ ಪರೀಕ್ಷೆಗಳು ನಡೆಯುವುದಿಲ್ಲ ಮತ್ತು ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಪಾಸ್ ಮಾಡಲಾಗುವುದು'' ಎಂದು ಮುಖ್ಯಮಂತ್ರಿ ಭಗೇಲ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (MoHFW) ಅಂಕಿಅಂಶಗಳ ಪ್ರಕಾರ, ಛತ್ತೀಸ್ಗಢಸಲ್ಲಿ ಒಟ್ಟು 7693 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಶನಿವಾರದಿಂದ ಇಲ್ಲಿವರೆಗೆ ರಾಜ್ಯದಲ್ಲಿ ಒಟ್ಟು 940 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 3,11,520 ಮಂದಿ ಇಲ್ಲಿವರೆಗೆ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಲ್ಲಿವರೆಗೆ ಒಟ್ಟು 3,940 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಕೊರೊನಾ ಆರ್ಭಟ: ಇಂದು 30,535 ಮಂದಿಗೆ ತಗುಲಿದ ಸೋಂಕು, 99 ಬಲಿ!