ETV Bharat / bharat

ತಮಿಳುನಾಡಿನಲ್ಲಿ ಇಂದಿನಿಂದ 10, 12ನೇ ತರಗತಿಗಳು ಆರಂಭ! - Schools reopen for class 10th and 12th in TN

ವಾರ್ಷಿಕ ಪರೀಕ್ಷೆ ಗಮನದಲ್ಲಿಟ್ಟುಕೊಂಡು ತಮಿಳುನಾಡಿನಲ್ಲಿ ಇಂದಿನಿಂದ 10 ಹಾಗೂ 12ನೇ ತರಗತಿಗಳು ಪುನಾರಂಭಗೊಳ್ಳುತ್ತಿವೆ.

Schools reopen in TN
Schools reopen in TN
author img

By

Published : Jan 19, 2021, 4:40 AM IST

ಚೆನ್ನೈ: ತಮಿಳುನಾಡಿನಲ್ಲಿ ಇಂದಿನಿಂದ 10ನೇ ತರಗತಿ ಹಾಗೂ 12ನೇ ತರಗತಿ ಪುನಾರಂಭಗೊಳ್ಳಲಿದ್ದು, ಪ್ರತಿ ಕ್ಲಾಸ್ ರೂಂನಲ್ಲಿ 25 ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು ಮಾರ್ಚ್​-ಏಪ್ರಿಲ್ ತಿಂಗಳಲ್ಲಿ ವಾರ್ಷಿಕ ಪರೀಕ್ಷೆ ಎದುರಿಸಲಿದ್ದು, ಹೀಗಾಗಿ ವಿದ್ಯಾರ್ಥಿಗಳ ಹಿತಾಸಕ್ತಿ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಪ್ರತಿ ವಿದ್ಯಾರ್ಥಿಗೂ ವಿಟಮಿನ್​ ಮಾತ್ರೆ ನೀಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಆರೋಗ್ಯ, ವೈದ್ಯಕೀಯ ತಜ್ಞರು, ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಸಚಿವರ ಅಭಿಪ್ರಾಯ ಆಧರಿಸಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ಶಿಕ್ಷಣ ಪ್ರಕಟಣೆಯಲ್ಲಿ ತಿಳಿಸಿದೆ.

ಓದಿ: ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿ: ಎರಡು ಪಂದ್ಯಗಳಿಗಾಗಿ ಇಂದು ಟೀಂ ಇಂಡಿಯಾ ಪ್ರಕಟ

ಜನವರಿ 6ರಿಂದ 8ರವರೆಗೆ ವಿದ್ಯಾರ್ಥಿಗಳ ಪೋಷಕರ ಅಭಿಪ್ರಾಯ ಸಗ್ರಹಿಸಲಾಗಿದ್ದು, ಇದರಲ್ಲಿ ಅತಿ ಹೆಚ್ಚು ಜನರು ಶಾಲೆ ಪುನಾರಂಭ ಮಾಡುವಂತೆ ತಿಳಿಸಿದ್ದಾರೆ ಎಂದು ಕಳೆದ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ತಿಳಿಸಿದ್ದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ವಿಶೇಷ ಮನವಿ ಮಾಡಿದ್ದ ಮುಖ್ಯಮಂತ್ರಿಗಳು, ಕೋವಿಡ್​ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆ ಮಾಡುವಂತೆ ತಿಳಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.