ಶಿಯೋಪುರ್ (ಮಧ್ಯಪ್ರದೇಶ): ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕೆಲ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸೀಪ್ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಶಿಯೋಪುರದಲ್ಲಿ ಪ್ರವಾಹ ಸಿಲುಕಿದ್ದ ಹಲವರನ್ನು ಎಸ್‌ಡಿಆರ್‌ಎಫ್ ತಂಡ ರಕ್ಷಣೆ ಮಾಡಿದೆ.
ಸೀಪ್ ನದಿ ತುಂಬಿ ಹರಿಯುತ್ತಿರುವ ಪರಿಣಾಮ ಹಲವು ಹಳ್ಳಿಗಳಿಗೆ ನೀರು ನುಗ್ಗಿದ್ದು, ಜನರು ಅತಂತ್ರರಾಗಿದ್ದಾರೆ. ಹೀಗಾಗಿ, ಸೀಪ್ ನದಿ ಪ್ರವಾಹಕ್ಕೆ ಸಿಲುಕಿರುವರನ್ನು ಎಸ್‌ಡಿಆರ್‌ಎಫ್ ತಂಡ ಸ್ಥಳಾಂತರ ಮಾಡುತ್ತಿದೆ.
ಕಳೆದ ನಾಲ್ಕು ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಶಿಯೋಪುರ್, ಮೊರೆನಾ, ಭಿಂದ್, ಗುಣ, ಡಾಟಿಯಾ ಮತ್ತು ಗ್ವಾಲಿಯರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಜವರಾಯನ ಅಟ್ಟಹಾಸ: ಅಪಘಾತದಲ್ಲಿ 18 ಮಂದಿ ಸಾವು