ETV Bharat / bharat

ಮಧ್ಯಪ್ರದೇಶದ ಬಾಲಘಾಟ್‌ನಲ್ಲಿ ಎನ್‌ಕೌಂಟರ್: ಇಬ್ಬರು ಮಹಿಳಾ ನಕ್ಸಲರ ಹತ್ಯೆ - ಮಧ್ಯಪ್ರದೇಶ ಪೊಲೀಸ್‌ ಮಹಾನಿರ್ದೇಶಕ ಜಿಪಿ ಸಿಂಗ್

ಮಧ್ಯಪ್ರದೇಶದ ಬಾಲಘಾಟ್‌ ಪ್ರದೇಶದಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಎಂಪಿ ಪೊಲೀಸರು ಮಾಹಿತಿ ನೀಡಿದ್ದಾರೆ.

search-operation-in-balaghat-continues-after-two-women-naxalites-killed
ಮಧ್ಯಪ್ರದೇಶದ ಬಾಲಘಾಟ್‌ನಲ್ಲಿ ಎನ್‌ಕೌಂಟರ್‌; ಇಬ್ಬರು ಮಹಿಳಾ ನಕ್ಸಲರ ಹತ್ಯೆ
author img

By

Published : Dec 12, 2020, 10:49 PM IST

ಭೂಪಾಲ್‌ (ಮಧ್ಯಪ್ರದೇಶ): ಬಾಲಘಾಟ್‌ ಪ್ರದೇಶದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸ್ಥಳೀಯ ಪೊಲೀಸರು, 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಮಹಿಳಾ ನಕ್ಸಲ್‌ಗಳನ್ನು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಮಾಹಿತಿ ನೀಡಿದ ಮಧ್ಯಪ್ರದೇಶ ಪೊಲೀಸ್‌ ಮಹಾನಿರ್ದೇಶಕ ಜಿಪಿ ಸಿಂಗ್‌, ಕಿರ್ನಾಪುರ್‌ ಅರಣ್ಯ ಪ್ರದೇಶದಲ್ಲಿ ಮೂವರು ಮಹಿಳಾ ನಕ್ಸಲ್‌ಗಳು ದೊಡ್ಡ ಪ್ರಮಾಣದಲ್ಲಿ ಕೆಲ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇರೆಗೆ ದಾಳಿ ಮಾಡಲಾಗಿತ್ತು. ಛತ್ತೀಸ್‌ಗಢ, ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಬಾಲಘಾಟ್‌ ಜಿಲ್ಲೆಯಲ್ಲಿ ನಡೆದ ಪ್ರತ್ಯೋಕ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಮಹಿಳಾ ನಕ್ಸಲ್‌ಗಳನ್ನು ಹತ್ಯೆ ಮಾಡಲಾಗಿದೆ. ಇವರ ಬಳಿ ಇದ್ದ ಕಾರ್ಟ್ರಿಜ್ಸ್‌ ಹಾಗೂ ಆಹಾರ ಪದಾರ್ಥಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮೊದಲು ಶರಣಾಗುವಂತೆ ನಮ್ಮ ತಂಡ ಸೂಚಿಸಿದೆ. ಆದರೆ ಆ ಕಡೆಯಿಂದ ಗುಂಡಿನ ದಾಳಿ ಆರಂಭವಾದ ಹಿನ್ನೆಲೆಯಲ್ಲಿ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಒಟ್ಟು 15 ನಿಮಿಷಗಳ ಕಾಲ ಎನ್‌ಕೌಂಟರ್‌ ನಡೆಸಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ಹೇಳಿದರು.

ಹತ್ಯೆಯಾದ ಇಬ್ಬರು ನಕ್ಸಲರನ್ನು ಹುಡುಕಿ ಕೊಟ್ಟವರಿಗೆ ತಲಾ 14 ರೂಪಾಯಿ ನೀಡುವುದಾಗಿ ಪೊಲೀಸರು ಘೋಷಿಸಿದ್ದರು. ಮೃತಪಟ್ಟ ಓರ್ವಳನ್ನು ಶೋಭಾ ಮಲಾಜ್‌ಖಾಂದ್‌ ಎಂದು ಗುರುತಿಸಲಾಗಿದೆ. ಅರಿಯಾ ಸಮಿತಿಯ ಸದಸ್ಯರಾಗಿದ್ದರು ಎನ್ನಲಾಗಿದೆ. ಈಕೆಯ ವಿರುದ್ಧ ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ಮಹಾರಾಷ್ಟ್ರದಲ್ಲಿ ಒಟ್ಟು 21 ಪ್ರಕರಣಗಳು ದಾಖಲಾಗಿದ್ದವು. ಮತ್ತೊಬ್ಬ ನಕ್ಸಲ್‌ ಮಹಿಳೆಯನ್ನು ಸವಿತಾ ಎಂದು ಗುರುತಿಸಲಾಗಿದೆ. ಈಕೆಯ ವಿರುದ್ಧ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ 25 ಪ್ರಕರಣಗಳು ದಾಖಲಾಗಿದ್ದವು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.