ETV Bharat / bharat

ಎರಡನೇ ಮದುವೆಗೆ ನಿರಾಕರಣೆ: ಯುವತಿಗೆ ಬೆಂಕಿ ಹಚ್ಚಿದ ಪ್ರಿಯಕರ.. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವು - ಮಲಗಿದ್ದಾಗ ಬೆಂಕಿ ಹಚ್ಚಿದ ಪ್ರಿಯಕರ

ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಮಲಗಿದ್ದಾಗ ಯುವತಿ ಮೇಲೆ ಪ್ರಿಯಕರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರಿಂದ ಗಂಭೀರವಾದ ಸುಟ್ಟು ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು.

second-dumka-petrol-kand-girl-burnt-to-death-by-petrol-in-dumka-is-critical
ಎರಡನೇ ಮದುವೆಗೆ ನಿರಾಕರಣೆ: ಯುವತಿಗೆ ಬೆಂಕಿ ಹಚ್ಚಿದ ಪ್ರಿಯಕರ...ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು
author img

By

Published : Oct 7, 2022, 5:09 PM IST

ದುಮ್ಕಾ (ಜಾರ್ಖಂಡ್): ತನ್ನೊಂದಿಗೆ ಎರಡನೇ ಮದುವೆಯಾಗಲು ನಿರಾಕರಿಸಿದ ಯುವತಿಗೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಚಿಕಿತ್ಸೆ ಫಲಿಸದೆ ಯುವತಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ದುಮ್ಕಾ ಜಿಲ್ಲೆಯ ಭಾಲ್ಕಿ ಗ್ರಾಮದ 19 ವರ್ಷದ ಮಾರುತಿ ಕುಮಾರಿ ಎಂಬ ಯುವತಿಯೇ ಮೃತ ದುರ್ದೈವಿಯಾಗಿದ್ದಾರೆ. ಬೆಂಕಿ ಹಚ್ಚಿದ್ದ ಆರೋಪಿಯನ್ನು ರಾಕೇಶ್ ರಾವುತ್ ಎಂದು ಗುರುತಿಸಲಾಗಿದೆ.

ಸಂತ್ರಸ್ತೆ ಮತ್ತು ಆರೋಪಿ ರಾಜೇಶ್ ರಾವುತ್ 2019ರಿಂದ ಸ್ನೇಹ ಹೊಂದಿದ್ದರು. ಇದೇ ಫೆಬ್ರವರಿ ತಿಂಗಳಲ್ಲಿ ರಾಜೇಶ್ ರಾವುತ್ ಬೇರೊಂದು ಯುವತಿಯನ್ನು ಮದುವೆಯಾಗಿದ್ದರು. ಆದರೂ, ಮಾರುತಿ ಕುಮಾರಿಯನ್ನೇ ಮದುವೆಯಾಗಲು ಬಯಸಿದ್ದರು. ಆದರೆ, ತನ್ನ ಪ್ರಸ್ತಾಪ ಒಪ್ಪಲು ನಿರಾಕರಿಸಿದಾಗ ಆರೋಪಿ ಸುಟ್ಟು ಹಾಕುವುದಾಗಿ ಜೀವ ಬೆದರಿಕೆ ಹಾಕಿದ್ದ ಎಂದು ಹೇಳಲಾಗಿದೆ.

second-dumka-petrol-kand-girl-burnt-to-death-by-petrol-in-dumka-is-critical
ಎರಡನೇ ಮದುವೆಗೆ ನಿರಾಕರಣೆ: ಯುವತಿಗೆ ಬೆಂಕಿ ಹಚ್ಚಿದ ಪ್ರಿಯಕರ...ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು

ಮಲಗಿದ್ದಾಗ ಬೆಂಕಿ ಹಚ್ಚಿದ ಪ್ರಿಯಕರ: ಅಂತೆಯೇ, ಗುರುವಾರ ರಾತ್ರಿ ಮಲಗಿದ್ದಾಗ ಮಾರುತಿ ಕುಮಾರಿ ಮೇಲೆ ಆರೋಪಿ ರಾಜೇಶ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಯುವತಿಗೆ ಗಂಭೀರವಾದ ಸುಟ್ಟು ಗಾಯಗಳಾಗಿದ್ದವು. ಮೊದಲಿಗೆ ದುಮ್ಕಾದಲ್ಲಿರುವ ಫುಲೋ ಜಾನೋ ವೈದ್ಯಕೀಯ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಕೆಯ ಸ್ಥಿತಿ ಹದಗೆಟ್ಟಿದ್ದರಿಂದ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆ(ರಿಮ್ಸ್​)ಗೆ ಸ್ಥಳಾಂತರಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಸ್ಪಂದಿಸದೇ ಯುವತಿ ಮೃತಪಟ್ಟಿದ್ದಾರೆ.

ಇನ್ನು, ಯುವತಿಗೆ ಪೆಟ್ರೋಲ್ ಸುರಿದು ಸುಟ್ಟ ಆರೋಪಿ ರಾಜೇಶ್ ರಾವುತ್ ರಾಮಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಹೇಶ್‌ಪುರ ಗ್ರಾಮದ ನಿವಾಸಿಯಾಗಿದ್ದು, ಮನೆಗೆ ಬಾಗಿಲು ಒಡೆದು ಒಳ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎನ್ನಲಾಗಿದೆ. ಒಂದೂವರೆ ತಿಂಗಳಲ್ಲಿ ದುಮ್ಕಾದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.

ಅದೇ ರೀತಿ ಆಗಸ್ಟ್ 23ರಂದು ಶಾರುಖ್ ಎಂಬ ಯುವಕ ತನ್ನ ಸ್ನೇಹಿತನೊಂದಿಗೆ ಸೇರಿ 16 ವರ್ಷದ ಬಾಲಕಿಯನ್ನು ಸುಟ್ಟು ಹಾಕಿದ್ದ. ಅಪ್ರಾಪ್ತ ಬಾಲಕಿ ಮನೆಯಲ್ಲಿ ಮಲಗಿದ್ದಾಗ ಶಾರುಖ್ ಬೆಂಕಿ ಹಚ್ಚಿದ್ದ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯು ರಾಂಚಿಯ ರಿಮ್ಸ್​ ಆಸ್ಪತ್ರೆಯಲ್ಲೇ ಅಸುನೀಗಿದ್ದರು.

ಇದನ್ನೂ ಓದಿ: ಪಾಟ್ನಾದಲ್ಲಿ ಮದ್ಯ ಸೇವಿಸಿ ನರ್ಸ್ ಮೇಲೆ ಅತ್ಯಾಚಾರ: ಆರೋಪಿ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.