ETV Bharat / bharat

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ : ಎರಡನೇ ಸಭೆ ಮುಕ್ತಾಯ - ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಸಭೆ

ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರ- 2ನೇ ಸಭೆ ಮುಕ್ತಾಯ- ಸಮಿತಿ ಅಧ್ಯಕ್ಷೆ ರಂಜನಾ ಪ್ರಕಾಶ ದೇಸಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆ

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಕುರಿತು ದೆಹಲಿಯಲ್ಲಿ ನಡೆಯುತ್ತಿರುವ ಸಭೆ

author img

By

Published : Jul 14, 2022, 7:21 PM IST

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಕುರಿತು ನಡೆಯುತ್ತಿರುವ ಸಭೆ ಮುಕ್ತಾಯಗೊಂಡಿದೆ. ಮೂರೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ತೀವ್ರ ಚರ್ಚೆ ನಡೆದಿದೆ. ಸಮಿತಿ ಅಧ್ಯಕ್ಷ ರಂಜನಾ ಪ್ರಕಾಶ ದೇಸಾಯಿ ಅಧ್ಯಕ್ಷತೆಯಲ್ಲಿ ನಡೆದ ಎರಡನೇ ಸಭೆ ಇದಾಗಿದೆ. ಶೀಘ್ರದಲ್ಲೇ ಮೂರನೇ ಸಭೆಯೂ ಜರುಗಲಿದೆ.

ಜುಲೈ 4 ರಂದು ದೆಹಲಿಯಲ್ಲಿ ಸಮಿತಿಯ ಮೊದಲ ಸಭೆ ನಡೆದಿತ್ತು. ಸಮಿತಿಯು ಆರು ತಿಂಗಳೊಳಗೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿದೆ. ಈ ಮೂಲಕ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ.

ಸರ್ಕಾರ ರಚನೆಯಾದ ತಕ್ಷಣ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮೇ 27 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ಐದು ಸದಸ್ಯರ ಸಮಿತಿಯನ್ನು ರಚಿಸಿದ್ದರು. ಈ ಸಮಿತಿಯು ಏಳು ಅಂಶಗಳಲ್ಲಿ ತನ್ನ ವರದಿಯನ್ನು ಸಿದ್ಧಪಡಿಸಲಿದೆ.

ಇದನ್ನೂ ಓದಿ: ತುಂಗಭದ್ರಾ ನೀರಿನ ಮಟ್ಟದಲ್ಲಿ ಏರಿಕೆ: ನದಿಪಾತ್ರದ ಗ್ರಾಮಗಳ ಜನರಿಗೆ ರೆಡ್ ಅಲರ್ಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.