ನೀಮುಚ್ (ಮಧ್ಯಪ್ರದೇಶ): ಹನುಮಾನ್ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾದ ಘಟನೆ ಮಧ್ಯಪ್ರದೇಶದ ನೀಮುಚ್ ನಗರದಲ್ಲಿ ನಡೆದಿದೆ. ವಿವಾದ ಉಂಟಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇಲ್ಲಿನ ಹಳೆ ಕೋರ್ಟ್ ಪ್ರದೇಶದ ಪ್ರಾರ್ಥನಾ ಸ್ಥಳವೊಂದರಲ್ಲಿ ಹನುಮಾನ್ ಪ್ರತಿಮೆಯನ್ನು ಸ್ಥಾಪಿಸಲು ಗುಂಪೊಂದು ಯತ್ನಿಸಿದೆ. ಇದೇ ವಿಷಯ ಗಲಾಟೆಗೆ ಕಾರಣವಾಗಿದ್ದು, ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ನಡೆಸಿದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು.
ಸ್ಥಳದಲ್ಲಿ ಇನ್ನು ಉದ್ವಿಗ್ನ ವಾತಾರವಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಪೂರ್ವಾನುಮತಿ ಇಲ್ಲದೆ ಮೆರವಣಿಗೆ, ಧರಣಿ ಅಥವಾ ಸಭೆಗಳನ್ನು ಆಯೋಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇಹಾ ಮೀನಾ ತಿಳಿಸಿದ್ದಾರೆ. ಅಲ್ಲದೇ, ಈ ಪ್ರದೇಶದಲ್ಲಿ ಧ್ವನಿವರ್ಧಕಗಳ ಬಳಕೆಗೂ ನಿಷೇಧ ಹೇರಲಾಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಶಿವಲಿಂಗಕ್ಕೆ ಭದ್ರತೆ ನೀಡಿ, ಮಸೀದಿಯಲ್ಲಿ ಪ್ರಾರ್ಥನೆಗೆ ಅಡ್ಡಿ ಬೇಡ: ಗುರುವಾರಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ