ETV Bharat / bharat

ಜೈಶ್-ಎ-ಮೊಹಮ್ಮದ್ ಸಂಘಟನೆ ಜೊತೆ ನಂಟು: ಕಾನ್ಪುರದಲ್ಲಿ ಶಂಕಿತ ಉಗ್ರನ ಸೆರೆ, ಹೈಅಲರ್ಟ್ - ಭಯೋತ್ಪಾದಕ ನಿಗ್ರಹ ದಳ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಜೈಶ್-ಎ-ಮೊಹಮ್ಮದ್ ಜೊತೆ ನಂಟು ಹೊಂದಿದ್ದ ಸೈಫುಲ್ಲಾ ಎಂಬಾತನನ್ನು ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

security-agencies-alert-due-to-terrorist-habibul-arrest-in-kanpur
ಜೈಶ್-ಎ-ಮೊಹಮ್ಮದ್ ಸಂಘಟನೆ ಜೊತೆ ನಂಟು: ಕಾನ್ಪುರದಲ್ಲಿ ಶಂಕಿತ ಉಗ್ರನ ಸೆರೆ, ಹೈಅಲರ್ಟ್
author img

By

Published : Aug 14, 2022, 5:40 PM IST

Updated : Aug 14, 2022, 6:15 PM IST

ಕಾನ್ಪುರ (ಉತ್ತರ ಪ್ರದೇಶ): ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರೈಸಿರುವ ನಿಮಿತ್ತ ದೇಶಾದ್ಯಂತ ಅಮೃತ ಮಹೋತ್ಸವನ್ನು ಆಚರಿಸಲಾಗುತ್ತಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಏತನ್ಮಧ್ಯೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ 19 ವರ್ಷದ ಶಂಕಿತನನ್ನು ಭಯೋತ್ಪಾದಕ ನಿಗ್ರಹ ದಳ ಬಂಧಿಸಿದೆ. ಅಲ್ಲದೇ, ಈತನ ಬಂಧನದ ನಂತರ ಹೈ ಅಲರ್ಟ್ ಘೋಷಿಸಲಾಗಿದೆ.

ಉಗ್ರ ಸಂಘಟನೆಯಾದ ಜೈಶ್-ಎ-ಮೊಹಮ್ಮದ್ ಜೊತೆ ನಂಟು ಹೊಂದಿದ್ದ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ ಕಾನ್ಪುರದ ಹಬೀಬುಲ್ ಅಲಿಯಾಸ್ ಸೈಫುಲ್ಲಾ ಎಂಬಾತನನ್ನು ಬಂಧಿಸಲಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಬಂಧಿತನಾದ ಶಂಕಿತ ಭಯೋತ್ಪಾದಕ ನದೀಮ್‌ನ ಸಹಾಯಕ ಈ ಸೈಫುಲ್ಲಾ.

ಅಲ್ಲದೇ, ವಿಚಾರಣೆಯಲ್ಲಿ ನದೀಮ್ ತನಗೆ ಸೈಫುಲ್ಲಾ ಹಾಗೂ ನಾವಿರಿಬ್ಬರೂ ಜೈಶ್-ಎ-ಮೊಹಮ್ಮದ್ ಸಂಘಟನೆ ಜೊತೆಗೆ ಸಂಪರ್ಕ ಹೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನೆಲೆಸಿದ್ದ ಈ ಸೈಫುಲ್ಲಾ, ಮೂಲತಃ ಬಿಹಾರದ ಮೋತಿಹಾರಿ ಜಿಲ್ಲೆಯವನು ಎಂದು ಮಾಹಿತಿ ನೀಡಿದ್ದಾರೆ.

ಇಷ್ಟೇ ಅಲ್ಲ, ಸೈಫುಲ್ಲಾ ವರ್ಚುವಲ್ ಐಡಿಗಳನ್ನು ತಯಾರಿಸುವಲ್ಲಿ ಪರಿಣತರಾಗಿದ್ದಾನೆ. ನದೀಮ್ ಹಾಗೂ ಸೈಫುಲ್ಲಾ ಸೇರಿಕೊಂಡು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕರಿಗೆ ಸುಮಾರು 50 ಐಡಿಗಳನ್ನು ಒದಗಿಸಿರುವ ಶಂಕೆ ವ್ಯಕ್ತವಾಗಿದೆ. ಇವರು ಟೆಲಿಗ್ರಾಮ್, ವಾಟ್ಸ್​ಆ್ಯಪ್ ಮತ್ತು ಫೇಸ್‌ಬುಕ್ ಮೆಸೆಂಜರ್‌ನಂತಹ ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಇತ್ತ, ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಬಾಕಿ ಇರುವಾಗಲೇ ಶಂಕಿತ ಉಗ್ರನ ಬಂಧನದಿಂದ ಕಾನ್ಪುರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿಯೇ ಸ್ಥಳೀಯ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ಮತ್ತಷ್ಟು ಅಲರ್ಟ್ ಆಗಿವೆ.

ಇದನ್ನೂ ಓದಿ: ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾತಂತ್ರ್ಯೋತ್ಸವದ ರ‍್ಯಾಲಿಗೆ ಚಾಲನೆ ನೀಡಿದ ಸಚಿವ: ವಿವಾದದ ನಂತರ ಆಶ್ಚರ್ಯಕರ ಹೇಳಿಕೆ

Last Updated : Aug 14, 2022, 6:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.