ಶ್ರೀನಗರ: ಜಮ್ಮ ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪತ್ತೆ ಹಚ್ಚಿದ್ದಾರೆ. ಈ ಮೂಲಕ ಸಂಭವನೀಯ ದೊಡ್ಡ ದುರಂತವನ್ನು ತಪ್ಪಿಸಿದಂತಾಗಿದೆ.

ಇಂದು ಬೆಳಗ್ಗೆ ಪುಲ್ವಾಮಾದ ವೃತ್ತಾಕಾರದ ರಸ್ತೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ಐಇಡಿ ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
"ಭದ್ರತಾ ಪಡೆಗಳಿಂದ ಐಇಡಿಯನ್ನು ಯಶಸ್ವಿಯಾಗಿ ನಿಷ್ಕ್ರಿಯ ಮಾಡಲಾಗಿದೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ದುರಂತವನ್ನು ತಪ್ಪಿಸಿದಂತಾಗಿದೆ" ಎಂದು ಪೊಲೀಸ್ ಮೂಲಗಳು ತಿಳಿಸಿವೆ.