ETV Bharat / bharat

ಬಾರಾಮುಲ್ಲಾದಲ್ಲಿ ಮತ್ತೊಬ್ಬ ಎಲ್‌ಇಟಿ ಭಯೋತ್ಪಾದಕ ಸೆರೆ - ಭದ್ರತಾ ಪಡೆಗಳು ಕಾರ್ಯಚರಣೆ

ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಮತ್ತೊಬ್ಬ ಭಯೋತ್ಪಾದಕನನ್ನು ಬಂಧಿಸಿದ್ದಾರೆ.

LeT Terrorist
LeT Terrorist
author img

By

Published : May 28, 2022, 9:13 AM IST

ಬಾರಾಮುಲ್ಲಾ(ಜಮ್ಮು ಕಾಶ್ಮೀರ): ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಹೆಡೆಮುರಿ ಕಟ್ಟುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಶುಕ್ರವಾರ ಲಷ್ಕರ್-ಇ-ತೊಯ್ಬಾ ಉಗ್ರಗಾಮಿ ಸಂಘಟನೆಗೆ ಸೇರಿದ ಮತ್ತೊಬ್ಬ ಭಯೋತ್ಪಾದಕನನ್ನು ಬಂಧಿಸಿರುವುದಾಗಿ ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.

JKP, 52RR & 2 Bn SSB ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಎಲ್ಇಟಿ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಬಂಧಿಸಿವೆ. ಆತನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನ ವಶಪಡಿಸಿಕೊಳ್ಳಲಾಗಿದ್ದು, ಈ ಕುರಿತು ಯುಎ(ಪಿ) ಆ್ಯಕ್ಟ್ ಮತ್ತು ಐಎ ಆ್ಯಕ್ಟ್ ಅಡಿಯಲ್ಲಿ ಪಿಎಸ್ ಕ್ರೀರಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದಿದ್ದಾರೆ.

ಬಂಧಿತ ಉಗ್ರನನ್ನು ಹಸನ್ ಖಾನ್ ಅವರ ಮಗ ಮೊಹಮ್ಮದ್ ಸಲೀಂ ಖಾನ್ ಎಂದು ಗುರುತಿಸಲಾಗಿದೆ. ಈತ ದೌಲತ್‌ಪುರದಿಂದ ಔತೂರ ಬಾಳ ಕಡೆಗೆ ಬರುತ್ತಿದ್ದಾಗ ತಪಾಸಣೆ ನಡೆಸುತ್ತಿದ್ದ ಭದ್ರತಾ ಸಿಬ್ಬಂದಿ, ಈತನ ಚಲನವಲನವನ್ನು ಗುರುತಿಸಿ ವಿಚಾರಿಸಲು ಹೋದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಆದಾಗ್ಯೂ, ಜಾಣ್ಮೆಯಿಂದ ಬಂಧಿಸಲಾಯಿತು ಪೊಲೀಸ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿ ಗಡಿ ದಾಟಿ ಉಗ್ರರು ಪರಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.