ನವದೆಹಲಿ: ಪಂಜಾಬ್‌ನ ಫಿರೋಜ್‌ಪುರ್‌ನಲ್ಲಿ ಪ್ರಧಾನಿ ಮೋದಿ ಅವರ ಭದ್ರತಾ ಲೋಪ ಸಂಬಂಧ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ.
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯ ವರದಿ ಆಧರಿಸಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ತನ್ನ ತೀರ್ಪು ಪ್ರಕಟಿಸಲಿದೆ.
ಜನವರಿ 5 ರಂದು ಪಂಜಾಬ್‌ನ ಫಿರೋಜ್‌ಪುರ್‌ನಲ್ಲಿ ಬಿಜೆಪಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ತೆರಳುತ್ತಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಎದುರಿಸಬೇಕಾಯಿತು. ಸುಮಾರು 15 ರಿಂದ 20 ನಿಮಿಷಗಳ ಕಾಲ ಫ್ಲೈಓವರ್ನಲ್ಲೇ ಕಾಲ ಕಳೆದಿದ್ದರು. ಇದು ದೇಶದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿತ್ತು. ಜೊತೆಗೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ಮಾತಿನ ಸಮರಕ್ಕೂ ಕಾರಣವಾಗಿತ್ತು.
ಇದನ್ನೂ ಓದಿ: Modi Security Breach: ಬ್ಲೂ ಬುಕ್ ಪಾಲಿಸಿಲ್ಲ ಎಂದ ಅಧಿಕಾರಿ.. ಕಾರ್ಯಕರ್ತರಿಗೆ ಥಳಿಸಿ, ಊಟದ ಬಾಕ್ಸ್ ಕಸಿದರು ಎಂದ ಸಂಸದೆ