ಪ್ರಯಾಗ್‌ರಾಜ್ (ಉತ್ತರ ಪ್ರದೇಶ): ಯುಪಿ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಅವರು ಪ್ರಯಾಗ್‌ರಾಜ್‌ನ ಮುಂಡ್ರಾ ಪ್ರದೇಶದಲ್ಲಿ ನಾಮಪತ್ರ ಸಲ್ಲಿಸಲು ಹೋಗಿದ್ದ ವೇಳೆ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ.
ದಾಳಿಕೋರರ ಯತ್ನವನ್ನು ಭದ್ರತಾ ಸಿಬ್ಬಂದಿ ಹಾಗೂ ಬಿಜೆಪಿ ಕಾರ್ಯಕರ್ತರು ವಿಫಲಗೊಳಿಸಿದ್ದಾರೆ. ದಾಳಿಕೋರನಿಂದ ಭದ್ರತಾ ಸಿಬ್ಬಂದಿ ಹರಿತವಾದ ವಸ್ತು ಮತ್ತು ವಿಷ ಪದಾರ್ಥವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಪ್ಪು ಬಾವುಟ ತೋರಿಸಿದ್ದ ವಿದ್ಯಾರ್ಥಿನಿಗೆ ಎಸ್ಪಿ ಟಿಕೆಟ್!
ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದು, ಸಿದ್ಧಾರ್ಥ್ ನಾಥ್ ಸಿಂಗ್ ಅವರು ಅಲಹಾಬಾದ್ ಪಶ್ಚಿಮದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.