ಲಖನೌ(ಉತ್ತರ ಪ್ರದೇಶ): ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದವರ ವಿರುದ್ಧ ದೇಶದ್ರೋಹದ ಪ್ರಕರಣ (ಐಪಿಸಿ ಸೆಕ್ಷನ್ 124 A) ದಾಖಲಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯುಪಿ ಪೊಲೀಸರಿಗೆ ಆದೇಶಿಸಿದ್ದಾರೆ.
ಪಾಕಿಸ್ತಾನದ ಕ್ರಿಕೆಟ್ ಪಂದ್ಯದಲ್ಲಿ ಗೆದ್ದಿದ್ದನ್ನು ಸಂಭ್ರಮಿಸುವವರು ದೇಶದ್ರೋಹದ ಆರೋಪವನ್ನು ಎದುರಿಸಬೇಕಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿರುವ ಸುದ್ದಿ ಪತ್ರಿಕೆಯ ತುಣುಕೊಂದನ್ನು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.
ಸದ್ಯಕ್ಕೆ ಪಾಕ್ ಪರ ಘೋಷಣೆಗಳನ್ನು ಕೂಗಿದ ಅಥವಾ ಭಾರತದ ವಿರುದ್ಧ ಪಾಕಿಸ್ತಾನದ ವಿಜಯವನ್ನು ಸಂಭ್ರಮಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಐದು ಜಿಲ್ಲೆಗಳಲ್ಲಿ ಏಳು ಮಂದಿಯ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದ ಸ್ವತಂತ್ರ ಸಾಕ್ಷಿ ಕಿರಣ್ ಗೋಸಾವಿ ಪೊಲೀಸ್ ವಶ