ETV Bharat / bharat

ಮಹಾರಾಷ್ಟ್ರ, ಕೇರಳದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 6 ಸಾವು - ಪ್ರತ್ಯೇಕ ಅಪಘಾತ

ಮಹಾರಾಷ್ಟ್ರದ ಮುಂಬೈ ಮತ್ತು ಕೇರಳದ ತ್ರಿಶೂರ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಟ್ಟು ಆರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

Kerala and Maharastra  Separate accident  ಪ್ರತ್ಯೇಕ ಅಪಘಾತ  ಆರು ಜನ ಸಾವು
ಪ್ರತ್ಯೇಕ ಅಪಘಾತ: ಆರು ಜನ ಸಾವು
author img

By ETV Bharat Karnataka Team

Published : Jan 16, 2024, 12:47 PM IST

ಕೇರಳ/ಮಹಾರಾಷ್ಟ್ರ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಕಲ್ಲಿನ ಕ್ವಾರಿಯ ಹೊಂಡಕ್ಕೆ ಬಿದ್ದು, ಮೂವರು ಸಾವನ್ನಪ್ಪಿರುವ ಘಟನೆ ಕೇರಳದ ತ್ರಿಶ್ಯೂರ್‌ನಲ್ಲಿ ನಡೆದಿದೆ. ಮೃತರನ್ನು ಕೊಂಪಡಿಂಜಾಮಕಲ್ ಎಂಬಲ್ಲಿನ ನಿವಾಸಿಗಳಾದ ಶ್ಯಾಮ್, ಜಾರ್ಜ್ ಹಾಗೂ ಮುರಿಕಾಡ್ ನಿವಾಸಿ ಟಿಟೊ ಎಂದು ಗುರುತಿಸಲಾಗಿದೆ.

ಘಟನೆಯ ವಿವರ: ಸೋಮವಾರ ರಾತ್ರಿ 10:30 ಸುಮಾರಿಗೆ ತ್ರಿಶೂರ್‌ನ ಮಾಲಾ ಬಳಿಯ ಖಿಕ್ಕಟುತ್ಸೆರಿಯಲ್ಲಿ ಘಟನೆ ನಡೆದಿದೆ. ಕಾರು ಕಲ್ಲಿನ ಕ್ವಾರಿ ಸಮೀಪ ಸಂಚರಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದಿದೆ. ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಆಲೂರು ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು.

ಚಾಲಕುಡಿಯ ಸ್ಕೂಬಾ ತಂಡ ಸ್ಥಳಕ್ಕೆ ಕರೆಸಲಾಗಿತ್ತು. ಪರಮಡದ ಜಲಮೂಲದಲ್ಲಿ ಶೋಧ ನಡೆಸಿದ ಬಳಿಕ ಮಧ್ಯರಾತ್ರಿ 12:45ರ ಸುಮಾರಿಗೆ ಮೂವರ ಶವ ಪತ್ತೆಯಾಗಿದೆ. ಮೃತದೇಹಗಳನ್ನು ಖಿಕ್ಕಾಟುಸೆರಿಯ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಗ್ಯಾಸ್​ ಸಿಲಿಂಡರ್ ಸ್ಫೋಟ, 7 ಜನರಿಗೆ ಗಾಯ

ಮುಂಬೈ- ರಸ್ತೆ ಅಪಘಾತ: ಪರೇಲ್ ಸೇತುವೆಯ ಮೇಲೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೈಕ್​ ಮತ್ತು ಡಂಪರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ: ಇಂದು ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ಮೂವರು ಪರೇಲ್​ ಸೇತುವೆಯಿಂದ ವೇಗವಾಗಿ ಹೋಗುತ್ತಿದ್ದರು. ಈ ವೇಳೆ ಡಂಪರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್​ನಲ್ಲಿದ್ದ ಮೂವರೂ ಗಂಭೀರವಾಗಿ ಗಾಯಗೊಂಡಿದ್ದರು. ಭೋಯಿವಾಡ ಪೊಲೀಸರು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಎಲ್ಲರೂ ಮಾರ್ಗಮಧ್ಯೆ ಮೃತಪಟ್ಟರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಭೋಯಿವಾಡ ಪೊಲೀಸರು ನಡೆಸುತ್ತಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತಕ್ಕೆ ಅತಿಯಾದ ವೇಗವೇ ಕಾರಣ ಎಂದು ಶಂಕಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.