ಹೈದರಾಬಾದ್ : ತೆಲಂಗಾಣದ ಆರೋಗ್ಯ ಸಚಿವ ಎಟೆಲಾ ರಾಜೇಂದರ್ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿ ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಚಂದ್ರಶೇಖರ್ ರಾವ್ ಈ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆರೋಗ್ಯ ಸಚಿವರ ವಿರುದ್ಧ ಮೇದಕ್ ಜಿಲ್ಲೆಯ ಮಸಾಯಿಪೇಟ್ ಮಂಡಲದ ಅಚಾಂಪೇಟ್ ಹೊರವಲಯದಲ್ಲಿರುವ ಜಮೀನು ಅತಿಕ್ರಮಣ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರು ಮೇದಕ್ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ನೀಡುವ ವರದಿಯನ್ನು ಸಿಎಂಗೆ ಸಲ್ಲಿಸಲಿದ್ದಾರೆ. ಇದರ ಜೊತೆಗೆ, ಡಿಜಿಪಿ ಪೂರ್ಣಚಂದ್ರ ರಾವ್ ಅವರಿಗೂ ಪ್ರಕರಣದ ಸತ್ಯಾಸತ್ಯತೆ ತಿಳಿಯುವಂತೆ ಸಿಎಂ ಸೂಚಿಸಿದ್ದಾರೆ.
ತನ್ನ ವಿರುದ್ಧದ ಆರೋಪಗಳ ಕುರಿತು ಪ್ರತಿಕ್ರಿಯಿಸಿರುವ ಸಚಿವ ಎಟೆಲಾ ರಾಜೇಂದರ್, ಆರೋಪವನ್ನು ಅಲ್ಲಗಳೆದಿದ್ದಾರೆ. ತೆಲಂಗಾಣದ ಜನತೆಗೆ ನನ್ನ ಜೀವನ ಗೊತ್ತಿದೆ, ಇದರಲ್ಲಿ ಮುಚ್ಚಿಡುವಂತದ್ದು ಏನೂ ಇಲ್ಲ ಎಂದಿದ್ದಾರೆ. ಅಲ್ಲದೆ, ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ಪ್ರಕರಣ ತನಿಖೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ.
ಓದಿ : ಈಡೇರದ ಅಮಿತ್ ಶಾ ಕನಸು.. ಪಶ್ಚಿಮ ಬಂಗಾಳದಲ್ಲಿ ಮಮತಾ ದೀದಿಯದ್ದೇ ಪಾರುಪತ್ಯ..!