ಅಜಂಗಢ(ಉತ್ತರಪ್ರದೇಶ): ಅಹ್ರಾಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ಮದ್ಯ ಸೇವಿಸಿ 7 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಘಟನೆ ಸಂಬಂಧ ಗ್ರಾಮಸ್ಥರು ಕಿಡಿಕಾರಿದ್ದು, ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಕ್ರಮ ಮದ್ಯದ ದಂಧೆ ಹೆಚ್ಚಾಗಿದೆ. ಅಹ್ರಾಲಾ ನಗರ ಪಂಚಾಯತ್ ಮಹುಲ್‌ನಲ್ಲಿರುವ ಹಳ್ಳಿಗಾಡಿನ ಮದ್ಯದ ಅಂಗಡಿಯಿಂದ ಭಾನುವಾರ ಸಂಜೆ ಮಾರಾಟವಾದ ಮದ್ಯವು ವಿಷಪೂರಿತವಾಗಿತ್ತು ಎಂದು ತಿಳಿದುಬಂದಿದೆ.
ಘಟನೆಯಿಂದ ಸುತ್ತಮುತ್ತಲ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಸಾವನ್ನಪ್ಪಿದವ ಕುಟುಂಬಗಳ ಗೋಳಾಟ ಹೇಳತೀರದ್ದಾಗಿತ್ತು. ವಿಷಪೂರಿತ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈಗಾಗಲೇ ಹಲವೆಡೆ ದಾಳಿ ನಡೆಸಿ 12 ಮಂದಿಯನ್ನು ಬಂಧಿಸಲಾಗಿದ್ದು, ಮದ್ಯದಲ್ಲಿ ಅತಿಯಾದ ರಾಸಾಯನಿಕಗಳನ್ನು ಬೆರೆಸಲಾಗಿದೆ. ಅದು ವಿಷಕಾರಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಸಾರೈಖ್ವಾಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಜನರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದರು.
ಇದನ್ನೂ ಓದಿ: ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ನ್ಯಾಯ ಸಿಗುವವರೆಗೂ ಹೋರಾಡೋಣ ಎಂದ ಖುಷ್ಬೂ