ಮಲಪ್ಪುರಂ(ಕೇರಳ): ಕೋಝಿಕ್ಕೋಡ್‌ನ ಕರಿಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಲಾಕಿ ದಂಪತಿಯನ್ನು ತಪಾಸಣೆ ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 7 ಕೆಜಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆ ಇದಾಗಿದೆ. ಒಳ ಉಡುಪು ಮತ್ತು ಗುದದ್ವಾರದಲ್ಲಿ ಚಿನ್ನವನ್ನಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳು ಇವರ ಕಳ್ಳಾಟವನ್ನು ಬಯಲು ಮಾಡಿದ್ದಾರೆ.
ಅಮ್ಮಿನಿಕ್ಕಾಡ್ದ ನಿವಾಸಿಗಳಾದ ಅಬ್ದುಲ್ ಸಮದ್ ಮತ್ತು ಪತ್ನಿ ಸಫ್ನಾ ಬಂಧಿತ ಆರೋಪಗಳಾಗಿದ್ದು, ಸಫ್ನಾ ಐದು ತಿಂಗಳ ಗರ್ಭಿಣಿ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಿಕಿತ್ಸೆಗಾಗಿ ತಾವು ತೆರಳುತ್ತಿರುವುದಾಗಿ ಹೇಳಿ ಅಧಿಕಾರಿಗಳನ್ನ ಯಾಮಾರಿಸಬಹುದು ಎಂಬ ಕಾರಣದಿಂದ ಇವರು ಇಷ್ಟೊಂದು ಚಿನ್ನವನ್ನ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕಳೆದ ಮಂಗಳವಾರ ಸಹ ಕಸ್ಟಮ್ಸ್ ಅಧಿಕಾರಿಗಳು 6.26 ಕೆಜಿ ಚಿನ್ನವನ್ನ ವಶಕ್ಕೆ ಪಡೆದುಕೊಂಡಿದ್ದರು.
ಇದನ್ನೂ ಓದಿ: ಕಳ್ಳತನದ ಆರೋಪ: ವಾಚ್ಮ್ಯಾನ್ಗೆ ತಲೆಕೆಳಗಾಗಿ ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು
ಏಪ್ರಿಲ್ ತಿಂಗಳ ಆರಂಭದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದ ಕಸ್ಟಮ್ಸ್ ಅಧಿಕಾರಿಗಳು 1.5 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಮೂವರು ಪ್ರಯಾಣಿಕರನ್ನ ಬಂಧಿಸಿದ್ದರು.