ದಿಬ್ರುಗಢ್: ಮದುವೆಗೆ ತೆರಳುತ್ತಿದ್ದ ಕಾರೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದಿರುವ ಘಟನೆ ಲೆಪೆಟ್ಕಾಟ್ನ ರಾಷ್ಟ್ರೀಯ ಎನ್ಎಚ್ 37ರಲ್ಲಿ ನಡೆದಿದೆ.
ಮದುವೆಗೆ ಎಂದು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿದ್ದು, ಕೆಲವರಿಗೆ ಗಾಯಗಳಾಗಿವೆ.
ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ಬಲಿ
ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಆಸ್ಪತ್ರೆಯಲ್ಲಿ ಮೃತ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿತು.
ಇದನ್ನೂ ಓದಿ: ಬೈಕ್ಗೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವು
ಈ ಘಟನೆ ಕುರಿತು ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.