ದಾಂತೇವಾಡ (ಛತ್ತೀಸ್ಗಢ): ನದಿಯಲ್ಲಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಹಲವರು ನೀರು ಪಾಲಾಗಿರುವ ಘಟನೆ ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ನಡೆದಿತ್ತು. ಆದರೆ ರಕ್ಷಣಾ ಪಡೆ ಎಲ್ಲ 7 ಗ್ರಾಮಸ್ಥರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಈ ಪೈಕಿ ಮೂವರು ತಮ್ಮನ್ನು ತಾವು ರಕ್ಷಿಸಿಕೊಂಡು ನದಿಯಿಂದ ಹೊರ ಬಿದ್ದಿದ್ದಾರೆ. ಇನ್ನೂ ಏಳು ಜನರು ಮುಳುಗಿದ್ದಾರೆ ಎಂದು ತಿಳಿದು ಬಂದಿತ್ತು. ಈ ವಿಷಯ ತಿಳಿದು ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿ, ಎಲ್ಲರನ್ನು ರಕ್ಷಣೆ ಮಾಡಿ ಪ್ರಾಣ ಕಾಪಾಡಿದ್ದಾರೆ.
ದಾಂತೇವಾಡದ ಇಂದ್ರಾವತಿ ನದಿಯಲ್ಲಿ ಈ ದುರಂತ ಸಂಭವಿಸಿದೆ. ಇಲ್ಲಿನ ಮುಚ್ನಾರ್ ಘಾಟ್ನಲ್ಲಿ ದೋಣಿ ಪಲ್ಟಿಯಾಗಿದೆ. ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರಿದ್ದರು. ಇವರೆಲ್ಲರೂ ನದಿ ದಾಟುತ್ತಿದ್ದರು. ಆ ವೇಳೆ ದೋಣಿ ಮಗುಚಿ ಅವಘಡ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ದೋಣಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು.
ಇದನ್ನೂ ಓದಿ: ಕೇರಳದ ದೋಣಿ ದುರಂತದಲ್ಲಿ ಒಂದೇ ಕುಟುಂಬದ 11 ಮಂದಿ ಸಾವು!
ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಒಂದೇ ಗ್ರಾಮಕ್ಕೆ ಸೇರಿದವರಾಗಿದ್ದು, ಬಾರ್ಸೂರು ವಾರದ ಸಂತೆಯಿಂದ ಹಿಂತಿರುಗುತ್ತಿದ್ದರು. ಆದರೆ, ಈ ದೋಣಿ ತುಂಬಾ ಚಿಕ್ಕದಾಗಿತ್ತು. ಅದರಲ್ಲಿ ಹೆಚ್ಚಿನ ಜನರಿದ್ದರು. ಹೀಗಾಗಿ ನದಿ ಮಧ್ಯೆ ದೋಣಿ ಮಗುಚಿದೆ. ಇದರ ಪರಿಣಾಮ ಏಳು ಮಂದಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಈ ಅವಘಡದ ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಕೇಂದ್ರ ದಾಂತೇವಾಡದಿಂದ ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದರೊಂದಿಗೆ ರಕ್ಷಣಾ ತಂಡ ಕೂಡ ಸ್ಥಳಕ್ಕೆ ತಲುಪಿದೆ. ಮುಳುಗುಗಾರರ ತಂಡ ನೀರಿನಲ್ಲಿ ಕೊಚ್ಚಿ ಹೋದವರರಿಗಾಗಿ ಹುಡುಕಾಟ ಆರಂಭಿಸಲಾಗಿತ್ತು.
ಬದುಕಿಳಿದ ಮೂವರು: ಈ ದೋಣಿ ಅವಘಡದಲ್ಲಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓರ್ವ ವ್ಯಕ್ತಿಯೋರ್ವ ಈಜಿಕೊಂಡು ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. ಮತ್ತಿಬ್ಬರು ಮರದ ಕೊಂಬೆಯ ಸಹಾಯದಿಂದ ತಮ್ಮನ್ನು ತಾವು ರಕ್ಷಿಸಿಕೊಂಡಿದ್ದಾರೆ. ಸದ್ಯಕ್ಕೆ ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ಮತ್ತು ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಲಾಗಿತ್ತು. ಕಾರ್ಯಾಚರಣೆ ನಡೆಸಿದ ರಕ್ಷಣಾ ಸಿಬ್ಬಂದಿ ಎಲ್ಲರನ್ನು ಕಾಪಾಡಿದೆ.
ಇತ್ತೀಚೆಗೆ ಬಿಹಾರದ ದರ್ಭಾಂಗ್ ಜಿಲ್ಲೆಯಲ್ಲಿ ದೋಣಿ ಮಗುಚಿ ಐವರು ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇಲ್ಲಿಯ ಝಜ್ರಾ ಮತ್ತು ಗಧೇಪುರ ನಡುವಿನ ಶಹಪುರ್ ಚೌರ್ ಸಮೀಪ ಕಮಲಾ ನದಿಯಲ್ಲಿ ದೋಣಿ ಮಗುಚಿ ಬಿದ್ದು ಮೂವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ಪಡೆದು ಸ್ಥಳೀಯರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನು ಹೊರತೆಗೆದಿದ್ದರು.
ಇದನ್ನೂ ಓದಿ: ದೋಣಿ ಮಗುಚಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿ ಐವರ ದಾರುಣ ಸಾವು