ಸುರೇಂದ್ರನಗರ್ (ಗುಜರಾತ್): ಇಲ್ಲಿನ ಸುರೇಂದ್ರನಗರ್ ಜಿಲ್ಲೆಯ ಪಡ್ಡಿ ಎಂಬಲ್ಲಿ ಕಾರು - ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ತಡರಾತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಕಸ ತುಂಬಿದ್ದ ಲಾರಿ ಡಿಕ್ಕಿಯಾಗಿದ್ದು, ಪರಿಣಾಮ ಕಾರು ಹೊತ್ತಿ ಉರಿದಿದೆ ಎಂದು ಉಪ ವರಿಷ್ಠಾಧಿಕಾರಿ ಹೆಚ್.ಪಿ ದೋಷಿ ತಿಳಿಸಿದ್ದಾರೆ.
ಅಪಘಾತದಲ್ಲಿ ಕಾರು ಹೊತ್ತಿ ಉರಿದ ಪರಿಣಾಮ ಕಾರಿನೊಳಗಿದ್ದ 7 ಮಂದಿ ಸಜೀವ ದಹನವಾಗಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.