ಗಿರಿಡಿಹ್(ಜಾರ್ಖಂಡ್): ಜಾರ್ಖಂಡ್ನ ಗಿರಿಡಿಹ್ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಶನಿವಾರ ರಾಂಚಿಯಿಂದ ಗಿರಿಡಿಹ್ಗೆ ಬರುತ್ತಿದ್ದ ಬಸ್ ಇಲ್ಲಿನ ಬರಾಕರ್ ನದಿಗೆ ಉರುಳಿಬಿದ್ದ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ 12ಕ್ಕೂ ಹೆಚ್ಚು ಆಂಬ್ಯುಲೆನ್ಸ್ಗಳನ್ನು ನಿಯೋಜಿಸಲಾಗಿದೆ.
ಗಿರಿಡಿಹ್ -ದುಮ್ರಿ ರಸ್ತೆಯಲ್ಲಿ ಸಂಚರಿಸುವಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಬಸ್‌ನಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಅದರಲ್ಲಿ ಮೂರು ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣ ದೇವಿ, ಗಿರಿಡಿಹ್ ಶಾಸಕ ಸುದಿವ್ಯ ಕುಮಾರ್ ಸೋನು, ಜಿಲ್ಲಾಧಿಕಾರಿ ನಮನ್ ಪ್ರಿಯೇಶ್ ಲಕ್ಡಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಶರ್ಮಾ ಸ್ಥಳಕ್ಕೆ ಆಗಮಿಸಿದ್ದಾರೆ.
ಈ ವೇಳೆ ಮಾತನಾಡಿದ ಸಚಿವೆ ಅನ್ನಪೂರ್ಣ ದೇವಿ, ಇದು ಬಹುದೊಡ್ಡ ಅನಾಹುತವಾಗಿದೆ. ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕತ್ತಲಾಗಿರುವುದರಿಂದ ಮತ್ತು ಬಸ್ ಮುಳುಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಸ್ವಲ್ಪ ತೊಡಕು ಉಂಟಾಗಿದೆ ಎಂದು ಹೇಳಿದರು.
ಇದನ್ನೂ ಓದಿ : Fake Army Officer: ಸೇನಾ ಕ್ಯಾಪ್ಟನ್ ಸಮವಸ್ತ್ರದಲ್ಲಿ ಇರುವಾಗಲೇ ನಕಲಿ ಸೇನಾಧಿಕಾರಿ ಅರೆಸ್ಟ್