ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ಒಡೆದು ಪ್ರವಾಹ ಉಂಟಾಗಿದ್ದು, 100 ರಿಂದ 150 ಮಂದಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಮೂರು ಶವ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ರಾಣಿ ಗ್ರಾಮದ ಜನರನ್ನು ಸ್ಥಳಾಂತರಿಸಲಾಗುತ್ತಿದ್ದು, ಚಮೋಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಜೋಶಿಮಠದ ಧೌಲಿ ಗಂಗಾ ಕಣಿವೆಯಲ್ಲಿ ಹಿಮನದಿ ಒಡೆದ ಪರಿಣಾಮ ರಿಷಿ ಗಂಗಾ ತಪೋವನ್ ಜಲ ಜಲವಿದ್ಯುತ್ ಯೋಜನೆಯ ಡ್ಯಾಮ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ನಾಪತ್ತೆಯಾಗಿದ್ದು, ಅವರೆಲ್ಲಾ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿರಬಹುದೆಂದು ಅಧಿಕಾರಿಗಳು ಶಂಕೆ ವ್ಯಕ್ತವಾಗಿದೆ.
ಚಮೋಲಿಯ ತಪೋವನ ಪ್ರದೇಶದಲ್ಲಿ ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ಮೂವರ ಶವ ಪತ್ತೆಯಾಗಿವೆ ಎಂದು ಐಟಿಬಿಪಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಇಂಡೋ - ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
-
100-150 casualties feared in the flash flood in Chamoli district: Uttarakhand Chief Secretary OM Prakash to ANI pic.twitter.com/JoR76lWEAb
— ANI (@ANI) February 7, 2021 " class="align-text-top noRightClick twitterSection" data="
">100-150 casualties feared in the flash flood in Chamoli district: Uttarakhand Chief Secretary OM Prakash to ANI pic.twitter.com/JoR76lWEAb
— ANI (@ANI) February 7, 2021100-150 casualties feared in the flash flood in Chamoli district: Uttarakhand Chief Secretary OM Prakash to ANI pic.twitter.com/JoR76lWEAb
— ANI (@ANI) February 7, 2021
ಇದನ್ನೂ ಓದಿ: ಜೋಶಿಮಠದಲ್ಲಿ ಒಡೆದ ಹಿಮನದಿ: ಭೀಕರ ಪ್ರವಾಹದಿಂದ ಹೈ ಅಲರ್ಟ್ ಘೋಷಣೆ
ವಿಷ್ಣುಪ್ರಯಾಗ್, ರುದ್ರಪ್ರಯಾಗ್, ರಿಷಿಕೇಶ್, ಹರಿದ್ವಾರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಈ ಸಂಬಂಧ ತುರ್ತು ಸಭೆ ಕರೆದಿದ್ದಾರೆ.