ETV Bharat / bharat

ಆಂಧ್ರ ಹಿಂಸಾಚಾರಕ್ಕೆ ಸಂಬಂಧಿಸಿ 46 ಜನರ ಬಂಧನ: ಜಗನ್​ ಸರ್ಕಾರದ ವಿರುದ್ಧ ನಾಯ್ಡು, ಪವನ್ ಕಲ್ಯಾಣ್ ವಾಗ್ದಾಳಿ - ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು

ಶಾಂತಿಯುತ ಕೋನಸೀಮಾ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನತೆಗೆ ಸರ್ಕಾರ ಮತ್ತು ಪೊಲೀಸರೇ ಸಂಪೂರ್ಣ ಜವಾಬ್ದಾರಿ ಎಂದು ಎನ್.ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಇತ್ತ, ಪವನ್ ಕಲ್ಯಾಣ್ ಕೂಡ ಈ ಉದ್ವಿಗ್ನ ಪರಿಸ್ಥಿತಿಗೆ ಬೀಜ ಬಿತ್ತಿದವರು ಯಾರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದಿದ್ದಾರೆ..

TDP, Jana Sena slam YSRCP over Amalapuram violence
ಜಗನ್​ ಸರ್ಕಾರದ ವಿರುದ್ಧ ನಾಯ್ಡು, ಪವನ್ ಕಲ್ಯಾಣ್ ವಾಗ್ದಾಳಿ
author img

By

Published : May 25, 2022, 7:56 PM IST

Updated : May 25, 2022, 8:17 PM IST

ಅಮಲಾಪುರಂ (ಆಂಧ್ರಪ್ರದೇಶ): ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಮರು ನಾಮಕರಣ ಸಂಬಂಧ ಮಂಗಳವಾರ ನಡೆದ ಭಾರಿ ಹಿಂಸಾಚಾರದಲ್ಲಿ ಸಚಿವರು ಮತ್ತು ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 46 ಜನ ಆರೋಪಿಗಳನ್ನು ಅಮಲಾಪುರಂ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಮುನ್ನೆಚ್ಚರಿಕೆ ಕ್ರಮವಾಗಿ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಸಭೆ, ರ್‍ಯಾಲಿಗಳಿಗೆ ನಿರ್ಬಂಧ ಹೇರಲಾಗಿದೆ.

ಕೋನಸೀಮಾ ಜಿಲ್ಲೆಗೆ ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆ ಸರ್ಕಾರದ ಪ್ರಸ್ತಾವನೆ ಮುಂದಿಟ್ಟಿದೆ. ಇದನ್ನು ವಿರೋಧಿಸಿ ಕೋನಸೀಮಾ ಸಾಧನಾ ಸಮಿತಿ (ಕೆಎಸ್‌ಎಸ್) ಮಂಗಳವಾರ ಹಮ್ಮಿಕೊಂಡ ಪ್ರತಿಭಟನೆ ವೇಳೆ ಜಿಲ್ಲಾ ಕೇಂದ್ರವಾದ ಅಮಲಾಪುರದಲ್ಲಿ ಹಿಂಸಾಚಾರ ನಡೆದಿತ್ತು. ಇತ್ತ, ಸರ್ಕಾರ ಪ್ರಸ್ತಾವವನ್ನು ಬೆಂಬಲಿಸಿ ಇತರ ಗುಂಪುಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್​ ಪಡೆಗಳನ್ನು ಕರೆಸಿ ಭದ್ರತೆಗೆ ನಿಯೋಜಿಸಲಾಗಿದೆ.

ಮೊಬೈಲ್ ಸೇವೆ ಸ್ಥಗಿತ : ಹಿಂಸಾಚಾರ ಹತೋಟಿಗೆ ತರುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವ ಪೊಲೀಸರು, ಯಾವುದೇ ರೀತಿಯ ಪ್ರತಿಭಟನೆ ನಡೆಯದಂತೆ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಜೊತೆಗೆ ಪಟ್ಟಣಕ್ಕೆ ಬರುವ ಬಸ್‌ಗಳನ್ನೂ ರದ್ದುಗೊಳಿಸಲಾಗಿದೆ. ಮೊಬೈಲ್ ಫೋನ್ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ.

ಆರು ವಿವಿಧ ಕೇಸ್​ಗಳು ದಾಖಲು : ಹಿಂಸಾಚಾರ ಸಂಬಂಧ ಪೊಲೀಸರು ಇದುವರೆಗೆ ಆರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಅಲ್ಲದೇ, ಹಿಂಸಾಚಾರದಲ್ಲಿ ಪಾಲ್ಗೊಂಡ 46 ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೇ, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮಾಧ್ಯಮಗಳು ಹಾಗೂ ಪೊಲೀಸರ ವೀಡಿಯೊ ಚಿತ್ರೀಕರಣದ ಸಹಾಯದಿಂದ ಆರೋಪಿಗಳನ್ನು ಗುರುತಿಸುತ್ತಿದ್ದೇವೆ ಎಂದು ಡಿಐಜಿ ಪಾಲರಾಜು ತಿಳಿಸಿದ್ದಾರೆ.

ಮುಖಂಡರೊಂದಿಗೆ ಶಾಂತಿ ಸಭೆ : ಪ್ರಸ್ತುತ ಪರಿಸ್ಥಿತಿ ಈಗ ತಿಳಿಯಾಗಿದೆ. ಆದರೆ, ಪ್ರಸ್ತುತ ನಡೆಯುತ್ತಿರುವ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಅಹಿತಕರ ಘಟನೆಗಳನ್ನು ತಡೆಗಟ್ಟಲು ಮತ್ತು ಶಾಂತಿಯನ್ನು ಸ್ಥಾಪಿಸಲು ಪೊಲೀಸರು ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಸಭೆ ಶಾಂತಿ ಕಾಪಾಡುವಲ್ಲಿ ಸಹಕಾರವನ್ನು ನೀಡುವಂತೆ ಕೋರಿದ್ದಾರೆ.

ಜಗನ್​ ಸರ್ಕಾರದ ವಿರುದ್ಧ ವಾಗ್ದಾಳಿ : ಮಂಗಳವಾರ ನಡೆದ ಹಿಂಸಾಚಾರಕ್ಕೆ ಸಿಎಂ ಜಗನ್​ಮೋಹನ್ ​ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರವೇ ಕಾರಣ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಮತ್ತು ಜನಸೇನಾ ನಾಯಕ, ನಟ ಪವನ್ ಕಲ್ಯಾಣ್ ವಾಗ್ದಾಳಿ ನಡೆಸಿದ್ದಾರೆ.

ಶಾಂತಿಯುತ ಕೋನಸೀಮಾ ಪ್ರದೇಶದಲ್ಲಿ ಇತ್ತೀಚಿನ ಉದ್ವಿಗ್ನತೆಗಳಿಗೆ ಸರ್ಕಾರ ಮತ್ತು ಪೊಲೀಸರೇ ಸಂಪೂರ್ಣ ಜವಾಬ್ದಾರಿ ಎಂದು ನಾಯ್ಡು ಹೇಳಿದ್ದಾರೆ. ಸರ್ಕಾರದ ಸ್ಪಷ್ಟ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಟಿಡಿಪಿಯನ್ನು ದೂಷಿಸುತ್ತಿದೆ ಎಂದು ಟೀಕಿಸಿದ್ದಾರೆ. ಇತ್ತ, ಪವನ್ ಕಲ್ಯಾಣ್ ಕೂಡ ಈ ಉದ್ವಿಗ್ನ ಪರಿಸ್ಥಿತಿಗೆ ಬೀಜ ಬಿತ್ತಿದವರು ಯಾರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಸೂಕ್ಷ್ಮ ವಿಚಾರದಲ್ಲಿ ಗೃಹ ಸಚಿವೆ ಟಿ.ಅನಿತಾ ಆಧಾರ ರಹಿತ ಆರೋಪ ಮಾಡುವುದು ಬಿಡಬೇಕೆಂದು ಹೇಳಿದ್ದಾರೆ.

ಇನ್ನು, ಮಂಗಳವಾರ ಹಿಂಸಾಚಾರದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ, ರಾಜ್ಯ ಪಿ.ವಿಶ್ವರೂಪ ಮತ್ತು ವಿಧಾನಪರಿಷತ್ ಸದಸ್ಯ ಸತೀಶ್ ಅವರ ಮನೆಗಳಿಗೂ ಬೆಂಕಿ ಹಚ್ಚಿದರು. ಈ ಹಿಂಸಾಚಾರದಲ್ಲಿ ಪೊಲೀಸರು ಸೇರಿದಂತೆ ಹಲವು ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಉಗ್ರ ಯಾಸಿನ್ ಮಲಿಕ್​ಗೆ ಜೀವಾವಧಿ ಶಿಕ್ಷೆ, ₹10 ಲಕ್ಷ ದಂಡ: ದೆಹಲಿ ಎನ್​ಐಎ ಕೋರ್ಟ್​ನಿಂದ ಮಹತ್ವದ ತೀರ್ಪು

Last Updated : May 25, 2022, 8:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.