ETV Bharat / bharat

ಶಾಲಾ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ಬಸ್​ ಪಲ್ಟಿ: ಕನಿಷ್ಠ ಏಳು ವಿದ್ಯಾರ್ಥಿಗಳ ಸಾವು - etv bharat kannada

ಮಣಿಪುರದ ನೋನಿ ಜಿಲ್ಲೆಯಲ್ಲಿ ಶಾಲಾ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ಬಸ್​ ಪಲ್ಟಿಯಾಗಿ ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

several-students-feared-dead-in-road-accident-in-manipur
ಶಾಲಾ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ಬಸ್​ ಪಲ್ಟಿ: ಕನಿಷ್ಠ ಏಳು ವಿದ್ಯಾರ್ಥಿಗಳ ಸಾವು
author img

By

Published : Dec 21, 2022, 5:27 PM IST

ಇಂಫಾಲ್​ (ಮಣಿಪುರ): ಶಾಲಾ ಬಸ್ ಪಲ್ಟಿಯಾಗಿ ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟು, ಸುಮಾರು 20 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಣಿಪುರದ ನೋನಿ ಜಿಲ್ಲೆಯಲ್ಲಿ ನಡೆದಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ರಾಜಧಾನಿ ಇಂಫಾಲ್‌ನಿಂದ ಸುಮಾರು 55 ಕಿಮೀ ದೂರದಲ್ಲಿರುವ ನೋನಿ ಜಿಲ್ಲೆಯ ಲಾಂಗ್‌ಸೈ ಪ್ರದೇಶದ ಬಳಿ ಈ ದುರ್ಘಟನೆ ಸಂಭವಿಸಿದೆ. ಶಾಲಾ ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ನೋನಿ ಜಿಲ್ಲೆಯ ಖೌಪುಮ್‌ಗೆ ವಾರ್ಷಿಕ ಶಾಲಾ ಅಧ್ಯಯನ ಪ್ರವಾಸಕ್ಕೆ ತೆರಳಿದ್ದರು ಎಂದು ಗೊತ್ತಾಗಿದೆ.

ಸ್ಥಳಕ್ಕೆ ಪೊಲೀಸರು ಮತ್ತು ಎಸ್‌ಡಿಆರ್‌ಎಫ್, ವೈದ್ಯಕೀಯ ತಂಡ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದು, ಬಸ್‌ನಲ್ಲಿರುವ ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿರವಾರದಲ್ಲಿ ಕೂಲಿ ಕಾರ್ಮಿಕರಿದ್ದ ವಾಹನ ಪಲ್ಟಿ.. 10ಕ್ಕೂ ಹೆಚ್ಚು ಮಂದಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.