ಭಿಂಡ್(ಮಧ್ಯಪ್ರದೇಶ): ವೇಶ್ಯಾವಾಟಿಕೆ ನಡೆಯುತ್ತಿದ್ದ ನಗರದ ಹೋಟೆಲ್ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು 7 ಮಂದಿ ಪುರುಷರು ಹಾಗೂ ದಂಧೆಗೆ ಬಳಸಿಕೊಳ್ಳುತ್ತಿದ್ದ ಐವರು ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು ಏಳು ಮಂದಿ ಪುರುಷರು ಮತ್ತು ಐವರು ಯುವತಿಯರನ್ನು ಹೋಟೆಲ್‌ನಿಂದ ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಹೋಟೆಲ್‌ನ 2 ನೌಕರರನ್ನು ವಶಕ್ಕೆ ಪಡೆದು ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಮಹಿಳಾ ವಿಭಾಗದ ಉಸ್ತುವಾರಿ ಡಿಎಸ್ಪಿ ಪೂನಂ ಥಾಪಾ ಮಾಹಿತಿ ನೀಡಿದ್ದಾರೆ.
ಮುಂಬೈ ಮತ್ತು ದೆಹಲಿಯಿಂದ ಯುವತಿಯರನ್ನು ಕರೆಸಲಾಗಿದೆ ಎಂದು ಹೇಳಿ ದಂಧೆಗೆ ಗಿರಾಕಿಗಳನ್ನು ಆಕರ್ಷಿಸುತ್ತಿದ್ದರು. ಹೋಟೆಲ್‌ನ ಬಾಗಿಲಿಗೆ ಹೊರಗಿನಿಂದ ಬೀಗ ಹಾಕಿ ಒಳಗಡೆ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಹೋಟೆಲ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Cycle stunt: ಗಿನ್ನೆಸ್ ಬುಕ್ ಆಫ್ ರೆಕಾರ್ಡ್ ಸೇರಿದ ಅಬ್ದುಲ್ ರೆಹಮಾನ್