ETV Bharat / bharat

ಇದೇ ಮೊದಲು! ಲೋಕಸಭೆ ಚುನಾವಣೆಗೆ ಮತದಾನದ ಅವಕಾಶ ಪಡೆದ 997 ಲೈಂಗಿಕ ಕಾರ್ಯಕರ್ತೆಯರು - ಕಾನ್ಪುರ

ಮೊದಲ ಬಾರಿಗೆ ಕಾನ್ಪುರದ 997 ಲೈಂಗಿಕ ಕಾರ್ಯಕರ್ತರು 2024ರ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.

Representative image
ಪ್ರಾತಿನಿಧಿಕ ಚಿತ್ರ
author img

By ETV Bharat Karnataka Team

Published : Sep 20, 2023, 8:46 AM IST

ಕಾನ್ಪುರ (ಉತ್ತರ ಪ್ರದೇಶ): ಈ ಬಾರಿ ಲೈಂಗಿಕ ಕಾರ್ಯಕರ್ತೆಯರೂ ಕೂಡ ಲೋಕಸಭೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುತ್ತಿದೆ. ಕಾನ್ಪುರ ಜಿಲ್ಲಾಡಳಿತ 997 ಮಂದಿ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದೆ.

ಉತ್ತರ ಪ್ರದೇಶದಲ್ಲಿ ಈವರೆಗೆ, ಮತದಾರರ ಪಟ್ಟಿಗಳು ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಎಂಬ ಮೂರು ವರ್ಗದ ಮತದಾರರನ್ನು ಮಾತ್ರ ಒಳಗೊಂಡಿದ್ದವು. ಆದರೆ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನೂ ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕಾನ್ಪುರದಿಂದ ಮೊದಲ ಬಾರಿಗೆ 997 ಲೈಂಗಿಕ ಕಾರ್ಯಕರ್ತೆಯರು ಮತ ಚಲಾಯಿಸಲಿದ್ದಾರೆ. ಈ ಪೈಕಿ ಕ್ಯಾಂಟ್ ವಿಧಾನಸಭಾ ಕ್ಷೇತ್ರದಿಂದ 545 ಮಂದಿ ಲೈಂಗಿಕ ಕಾರ್ಯಕರ್ತೆಯರು, ಕಿದ್ವೈನಗರದಿಂದ 445 ಮತ್ತು ಮಹಾರಾಜಪುರ ಕ್ಷೇತ್ರದಿಂದ 7 ಹೆಸರುಗಳನ್ನು ನೋಂದಾಯಿಸಲಾಗಿದೆ.

ಬುದ್ಧದೇವ್ ಕರ್ಮಾಕರ್ vs ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳ ಪ್ರಕರಣವನ್ನು ಆಲಿಸಿದ ಸುಪ್ರೀಂ ಕೋರ್ಟ್ ಜನವರಿ 10, 2022ರಂದು ಮತದಾರರ ಪಟ್ಟಿಗೆ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನು ಸೇರಿಸಲು ಆದೇಶಿಸಿತ್ತು. ಅರ್ಜಿಯ ವಿಚಾರಣೆಯಲ್ಲಿ ಕೋರ್ಟ್, ಲೈಂಗಿಕ ಕಾರ್ಯಕರ್ತರಿಗೂ ಘನತೆಯ ಹಕ್ಕಿದೆ ಎಂದು ತೀರ್ಪು ನೀಡಿತ್ತು. ಲೈಂಗಿಕ ಕಾರ್ಯಕರ್ತೆಯರ ಜೀವನ ಸಾಮಾಜಿಕ ನಿರ್ಲಕ್ಷ್ಯದಿಂದ ಕೂಡಿದೆ. ಹೊರಗೆ ಹೋಗಲು ಸಾಧ್ಯವಾಗದ ಕಾರಣ ನಿವಾಸ ಪ್ರಮಾಣ ಪತ್ರವೂ ಇಲ್ಲ. ಹಾಗಾಗಿ ಎಲ್ಲಾ ರಾಜ್ಯಗಳಿಗೆ ಮತದಾರರ ಪಟ್ಟಿಯಲ್ಲಿ ಲೈಂಗಿಕ ಕಾರ್ಯಕರ್ತರ ಹೆಸರನ್ನು ಸೇರಿಸಲು ಸುಪ್ರೀಂ ಕೋರ್ಟ್​ ಸೂಚಿಸಿತ್ತು.

ಇದನ್ನೂ ಓದಿ: Sexual abuse : ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸಲು ಬೇಕಿದೆ ಅಗತ್ಯ ಕ್ರಮ..

ಲೈಂಗಿಕ ಕಾರ್ಯಕರ್ತರನ್ನು ಗುರುತಿಸಲು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ಎನ್‌ಎಸಿಒ) ಮತ್ತು ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ (ಎನ್‌ಎಸಿಎಸ್) ಸೇರಿದಂತೆ ಇತರ ಎನ್‌ಜಿಒಗಳ ಸಹಾಯವನ್ನೂ ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ. ಹಳೆಯ ಆದೇಶವನ್ನು ಉಲ್ಲೇಖಿಸಿ, ದಶಕದ ಹಿಂದೆ ಲೈಂಗಿಕ ಕಾರ್ಯಕರ್ತರಿಗೆ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ನೀಡದಿರುವ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು.

ಪ್ರಜಾಪ್ರಭುತ್ವದ ದೃಷ್ಟಿಕೋನದಿಂದ ಇದೊಂದು ಐತಿಹಾಸಿಕ ಹೆಜ್ಜೆ ಎಂದು ಕಾನ್ಪುರದ ಜಿಲ್ಲಾಧಿಕಾರಿ ವಿಶಾಖ್.ಜಿ ಹೇಳಿದ್ದಾರೆ. ಇದರಿಂದ ಈವರೆಗೆ ಮೂಲೆ ಗುಂಪಾಗಿದ್ದ ಲೈಂಗಿಕ ಕಾರ್ಯಕರ್ತೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಲೈಂಗಿಕ ಕಾರ್ಯಕರ್ತೆಯರಲ್ಲದೆ ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಜನಾಂಗದವರನ್ನೂ ಮತದಾರರ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಫೆಬ್ರವರಿ 10ರಿಂದ ಮಾರ್ಚ್ 7 ರವರೆಗೆ ಉತ್ತರ ಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯ ನಂತರ ಚುನಾವಣಾ ಆಯೋಗವು ಮತದಾರರ ಪಟ್ಟಿಗೆ ಲೈಂಗಿಕ ಕಾರ್ಯಕರ್ತೆಯರ ಹೆಸರನ್ನು ಸೇರಿಸುವ ಕೆಲಸ ಪ್ರಾರಂಭಿಸಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ತಯಾರಿ: ನಾಳೆ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.