ETV Bharat / bharat

ಬಿಎಚ್​ಯು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ: ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ - ಬಿಎಚ್​ಯು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ

Sexual harassment on BHU student: ಮೂವರು ಅಪರಿಚಿತ ವ್ಯಕ್ತಿಗಳು ವಿದ್ಯಾರ್ಥಿಯನ್ನು ಕರೆದೊಯ್ದು ವಿವಸ್ತ್ರಗೊಳಿಸಿ ವಿಡಿಯೋ ಮಾಡಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿನಿ ದೂರಿದ್ದಾಳೆ.

Students protest in University Capmus
ವಿದ್ಯಾರ್ಥಿಗಳಿಂದ ಕ್ಯಾಂಪಸ್​ನಲ್ಲಿ ಪ್ರತಿಭಟನೆ
author img

By ETV Bharat Karnataka Team

Published : Nov 2, 2023, 5:38 PM IST

Updated : Nov 2, 2023, 7:30 PM IST

ವಾರಾಣಸಿ: ಬನಾರಸ್​ ಹಿಂದೂ ವಿಶ್ವವಿದ್ಯಾಲಯದ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿ ವಿದ್ಯಾರ್ಥಿನಿಯೊಬ್ಬಳಿಗೆ ಮೂವರು ಅಪರಿಚಿತ ವ್ಯಕ್ತಿಗಳು ಕಿರುಕುಳ ನೀಡಿ ಬಲವಂತವಾಗಿ ಚುಂಬಿಸಿದ್ದು, ಮಾತ್ರವಲ್ಲದೇ ಆಕೆಯನ್ನು ವಿವಸ್ತ್ರಗೊಳಿಸಿ ವಿಡಿಯೋ ಮಾಡಿರುವ ಘಟನೆ ನಡೆದಿದೆ. ಇದನ್ನು ವಿರೋಧಿಸಿ, ಬಿಎಚ್​ಯು ಆವರಣದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

IIT Notice
ಐಐಟಿ ನೋಟಿಸ್​

ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಗುರುವಾರ ಬೆಳಗ್ಗೆ ಸಂಸ್ಥೆಯ ನಿರ್ದೇಶಕರ ಕಚೇರಿ ಎದುರು ಸಾವಿರಾರು ವಿದ್ಯಾರ್ಥಿಗಳು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕ್ಯಾಂಪಸ್​ನಲ್ಲಿ ಉತ್ತಮ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿನಿ ಎಫ್​ಐಆರ್​ನಲ್ಲಿ, "ಬುಧವಾರ ಮಧ್ಯರಾತ್ರಿ 1.30ರ ಹೊತ್ತಿಗೆ ನಾನು ವಾಕಿಂಗ್​ ಹೊರಟಿದ್ದು, ಗಾಂಧಿ ಸ್ಮೃತಿ ಹಾಸ್ಟೆಲ್ ಡಿವೈಡರ್​ ಬಳಿ ಗೆಳೆಯನನ್ನು ಭೇಟಿಯಾಗಿದ್ದೆ. ಅಲ್ಲಿಂದ ಇಬ್ಬರು ಒಟ್ಟಿಗೆ ನಡೆದುಕೊಂಡು ಹೋಗುತ್ತಿದ್ದೆವು. ನಾವು ಕರ್ಮನ್​ ಬಾಬಾ ದೇವಸ್ಥಾನದಿಂದ 300-400 ಮೀಟರ್​ ದೂರದಲ್ಲಿದ್ದಾಗ ಹಿಂದಿನಿಂದ ಮೂವರು ಅಪರಿಚಿತರು ಬೈಕ್​ನಲ್ಲಿ ಬಂದರು. ಅವರು ನನ್ನ ಬಾಯಿಯನ್ನು ಬಿಗಿಯಾಗಿ ಮುಚ್ಚಿ ನನ್ನನ್ನು ಹತ್ತಿರದ ಒಂದು ಸ್ಥಳಕ್ಕೆ ಕರೆದೊಯ್ದು ಬಲವಂತವಾಗಿ ಚುಂಬಿಸಿದರು. ಮಾತ್ರವಲ್ಲದೇ ನನ್ನನ್ನು ವಿವಸ್ತ್ರಗೊಳಿಸಿ, ಫೋಟೋ ಕ್ಲಿಕ್ಕಿಸಿ, ವಿಡಿಯೋ ಮಾಡಿದ್ದಾರೆ. ಸಹಾಯಕ್ಕಾಗಿ ಕಿರುಚಿಕೊಂಡಾಗ ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಬೈಕ್​ ಸವಾರರು ನನ್ನನ್ನು ಸುಮಾರು 10-15 ನಿಮಿಷಗಳ ನಂತರ ಹೋಗಲು ಬಿಟ್ಟರು. ನಾನು ಹಾಸ್ಟೆಲ್​ ಕಡೆ ಓಡಿದಾಗ ಮತ್ತೆ ಬೈಕ್​ ಶಬ್ದ ಕೇಳಿಸಿತು. ಭಯದಲ್ಲಿ ಪ್ರೊಫೆಸರ್​ ಮನೆಯೊಳಗೆ ಓಡಿದೆ. ನಾನು 20 ನಿಮಿಷಗಳ ಕಾಲ ಅಲ್ಲಿಯೇ ಇದ್ದೆ. ನಂತರ ಪ್ರೊಫೆಸರ್​ ನನ್ನನ್ನು ಅಲ್ಲಿಂದ ಐಐಟಿ ಬಿಎಚ್​ಯು ಭದ್ರತಾ ಅಧಿಕಾರಿಗಳ ಬಳಿಗೆ ಕರೆದೊಯ್ದರು." ಎಂದು ದೂರಿನಲ್ಲಿ ಹೇಳಿದ್ದಾಳೆ.

ದೂರಿನಲ್ಲಿ ವಿದ್ಯಾರ್ಥಿನಿ ಆರೋಪಿಗಳ ಗುರುತನ್ನು ಬಹಿರಂಗಪಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂತ್ರಸ್ತ ವಿದ್ಯಾರ್ಥಿನಿ ಮನವಿ ಮಾಡಿದ್ದಾಳೆ. ಮೂವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್​ 354-ಬಿ ಹಾಗೂ 506 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಹಲವು ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಐಟಿ-ಬಿಎಚ್​ಯು ವಿದ್ಯಾರ್ಥಿಗಳಿಂದ ಪ್ರತಿಭಟನೆ: ಘಟನೆ ಬೆಳಕಿಗೆ ಬರುತ್ತಿದ್ದಂತೆ, ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ, 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್​ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಸ್ಥೆಯ ಬಹುತೇಕ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ ಇಲ್ಲದಿರುವುದರಿಂದ ಕ್ಯಾಂಪಸ್​ನಲ್ಲಿ ಹುಡುಗಿಯರು ಸುರಕ್ಷಿತವಾಗಿ ಓಡಾಡುವಂತಿಲ್ಲ. ಕ್ಯಾಂಪಸ್​ನಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾಗಳು ಸಹ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಘಟನೆ ನಂತರ ಬನಾರಸ್​ ಹಿಂದೂ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ. ಐಐಟಿ- ಬಿಎಚ್​ಯು ನೋಟಿಸ್​ ಜಾರಿ ಮಾಡಿ ಹೊಸ ಆದೇಶ ಹೊರಡಿಸಿದೆ. ವಿವಿ ಕ್ಯಾಂಪಸ್​ಗೆ ಸಂಜೆ 5 ರ ನಂತರ ಬೆಂಲಗ್ಗೆ 10 ಗಂಟೆಯ ನಡುವೆ ಹೊರಗಿನವರ ಪ್ರವೇಶವನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ತೋರಿಸಿದ ನಂತರವೇ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ರವೇಶಿಸಲು ಅವಕಾಶ. ಈ ವ್ಯವಸ್ಥೆಯನ್ನು ತಕ್ಷಣವೇ ಜಾರಿಗೆ ತರಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ : ಹಾಡಹಗಲೇ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ: ಸಂತ್ರಸ್ತೆಯ ತಾಯಿಗೆ ಪ್ರಾಣ ಬೆದರಿಕೆ

Last Updated : Nov 2, 2023, 7:30 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.