ನಾಂದೇಡ್(ಮಹಾರಾಷ್ಟ್ರ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತ್ ಜೋಡೋ ಯಾತ್ರೆ' ಮುಂದಿನ ತಿಂಗಳು(ನವೆಂಬರ್) ನಾಂದೇಡ್‌ಗೆ ಬರಲಿದೆ. ನ.7 ರಂದು ನಾಂದೇಡ್ ಪ್ರವೇಶಿಸಲಿದ್ದು, 5 ದಿನಗಳ ಕಾಲ ಜಿಲ್ಲೆಯಲ್ಲಿ ತಂಗಲಿದೆ.
ನ.9 ರಂದು ಈ ಭಾರತ್ ಜೋಡೋ ಯಾತ್ರೆಯಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಭಾಗವಹಿಸಲಿದ್ದಾರೆ. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನೂ ಕಾಂಗ್ರೆಸ್ ಆಹ್ವಾನಿಸಿದೆ. ಆದರೆ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವರು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಅಶೋಕ್ ಚವಾಣ್ ಮಾಹಿತಿ ನೀಡಿದ್ದಾರೆ.
ಉಭಯ ನಾಯಕರಿಗೆ ಆಹ್ವಾನ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಭಾರತ್ ಜೋಡೋ ಯಾತ್ರೆ ನವೆಂಬರ್ ಮೊದಲ ವಾರದಲ್ಲಿ ನಾಂದೇಡ್ ಜಿಲ್ಲೆಯಿಂದ ಮಹಾರಾಷ್ಟ್ರ ಪ್ರವೇಶಿಸಲಿದೆ. ಈ ಯಾತ್ರೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ನಿಯೋಗ ಉಭಯ ನಾಯಕರಿಗೆ(ಶರದ್ ಪವಾರ್ & ಆದಿತ್ಯ ಠಾಕ್ರೆ ) ಆಹ್ವಾನ ನೀಡಿದೆ ಎಂದು ತಿಳಿದು ಬಂದಿದೆ.
ಭಾರತ್ ಜೋಡೋ ಯಾತ್ರೆಗೆ ದೇಶಾದ್ಯಂತ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ. ಮಹಾರಾಷ್ಟ್ರದಲ್ಲಿಯೂ ಎನ್‌ಸಿಪಿ ಮತ್ತು ಶಿವಸೇನೆ (ಠಾಕ್ರೆ ಬಣ) ಯಾತ್ರೆಯಲ್ಲಿ ಭಾಗವಹಿಸಲು ಒಪ್ಪಿಕೊಂಡಿದ್ದು, ಅದರ ಮಹತ್ವವನ್ನು ಹೆಚ್ಚಿಸಿದೆ.
ಇದನ್ನೂ ಓದಿ: ರಾಯಚೂರಿಗೆ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ಮುಖಂಡರಿಂದ ಅದ್ದೂರಿ ಸ್ವಾಗತ