ETV Bharat / bharat

ಶಿವಾಜಿ ಕುರಿತ ಮಹಾರಾಷ್ಟ್ರ ರಾಜ್ಯಪಾಲ ಕೊಶ್ಯಾರಿ ಹೇಳಿಕೆಗೆ ಎನ್‌ಸಿಪಿ ವಿರೋಧ

ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಕೊಶ್ಯಾರಿ ಹೇಳಿಕೆಯನ್ನು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರೋಧಿಸಿದ್ದಾರೆ.

sharad-pawar-statement-on-governor-koshiyari
ಶಿವಾಜಿ ಕುರಿತ ಮಹಾರಾಷ್ಟ್ರ ರಾಜ್ಯಪಾಲ ಕೊಶ್ಯಾರಿ ಹೇಳಿಕೆಗೆ ಎನ್‌ಸಿಪಿ ವಿರೋಧ
author img

By

Published : Nov 24, 2022, 7:33 PM IST

ಮುಂಬೈ(ಮಹಾರಾಷ್ಟ್ರ): ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಇತ್ತೀಚಿಗೆ ನೀಡಿದ ಹೇಳಿಕೆಯನ್ನು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಟೀಕಿಸಿದ್ದಾರೆ.

ರಾಜ್ಯಪಾಲರು ಎಲ್ಲ ಮಿತಿಗಳನ್ನು ದಾಟಿದ್ದಾರೆ. ಬೇಜವಾಬ್ದಾರಿ ಹೇಳಿಕೆ ನೀಡಿರುವವರಿಗೆ ದೊಡ್ಡ ಹುದ್ದೆ ನೀಡುವುದು ಸರಿಯಲ್ಲ. ರಾಷ್ಟ್ರಪತಿ ಮತ್ತು ಪ್ರಧಾನಿ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೊಶ್ಯಾರಿ ಕಳೆದ ವಾರ ಔರಂಗಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಛತ್ರಪತಿ ಶಿವಾಜಿ ಈ ಹಿಂದಿನ ಆದರ್ಶ ವ್ಯಕ್ತಿಯಾಗಿದ್ದರು. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಈಗಿನ ಆದರ್ಶವಾಗಿದ್ದಾರೆ ಎಂದಿದ್ದರು. ಶಿವಾಜಿ ಮಹಾರಾಜರು ಮರಾಠ ಸಾಮ್ರಾಜ್ಯದ ಅಧಿಪತಿಯಾಗಿದ್ದರು. ಮರಾಠಿ ಅಸ್ಮಿತೆಯ ಮುಖವಾಗಿದ್ದ ಅವರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಮಹಾರಾಷ್ಟ್ರದಲ್ಲಿ ಟೀಕೆಗೆ ಗುರಿಯಾಗಿತ್ತು. ಇದನ್ನು ಶಿವಸೇನೆ ಕೂಡ ವಿರೋಧಿಸಿತ್ತು.

ಇದನ್ನೂ ಓದಿ: ರಾಜ್ಯಪಾಲರನ್ನು ರಾಜ್ಯದಿಂದ ಹೊರ ಕಳುಹಿಸಿ: ಶಿವಾಜಿ ವಿವಾದದ ಬೆನ್ನಲ್ಲೇ ಬಿಜೆಪಿಗೆ ಶಿಂಧೆ ಬಣದ ನಾಯಕರ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.