ಬೆಂಗಳೂರು: ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಆಗಿರುವ ವರುಣ್ ಸಿಂಗ್ ಗಡಿ ನಿಯಂತ್ರಣ ರೇಖೆ ಬಳಿ ತೇಜಸ್ ಯುದ್ಧ ವಿಮಾನವನ್ನು ಸಮರ್ಥವಾಗಿ ಲ್ಯಾಂಡಿಂಗ್ ಮಾಡಿ ಅದರಲ್ಲಿದ್ದ ಯೋಧರ ಪ್ರಾಣ ಉಳಿಸಿದ್ದರು. ಅವರ ಈ ಅಸಾಧಾರಣ ಸಾಹಸವನ್ನು ಗುರುತಿಸಿದ್ದ ಕೇಂದ್ರ ಸರ್ಕಾರ ಶೌರ್ಯ ಚಕ್ರ ಪ್ರಶಸ್ತಿ ಘೋಷಿಸಿತ್ತು.
ಕಳೆದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ವರುಣ್ ಸಿಂಗ್ ಅವರಿಗೆ ಶೌರ್ಯ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದ್ದರು.
ಇದನ್ನೂ ಓದಿ: ಚಿಕಿತ್ಸೆ ಫಲಕಾರಿಯಾಗದೇ ವರುಣ್ ಸಿಂಗ್ ಹುತಾತ್ಮ: ಪ್ರಧಾನಿ ಮೋದಿ ಸಂತಾಪ